ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹಾವೇರಿ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #Haveri Terrible Accident ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, #CM Siddaramaiah ಹಾವೇರಿಯಲ್ಲಿ ಸಂಭವಿಸಿದ ಅಪಘಾತದ ಕುರಿತಾಗಿ ತಿಳಿಯಿತು. ಇಂತಹ ದುರ್ಘಟನೆ ನಡೆಯಬಾರದು. ಘಟನೆಯಲ್ಲಿ ಮೃತರಾದವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಘಟನೆ ಹಿನ್ನೆಲೆ:
ಹಾವೇರಿ ಬಳಿಯಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಲಾರಿ ನಡುವೆ ಇಂದು ನಸುಕಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲೆಯ 13 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
Also read: ರಾಜ್ಯದ ಬೃಹತ್ ಚಿರತೆ ಓಪನ್ ಸಫಾರಿ ಆರಂಭ | ಎಲ್ಲಿದೆ? ಹೇಗಿದೆ? ಇಲ್ಲಿದೆ ಮಾಹಿತಿ
ಮೃತರು ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ತೆರಳಿದ್ದರು ಎಂದು ವರದಿಯಾಗಿದ್ದು, ದೇವಸ್ಥಾನದಿಂದ ಮರಳಿ ಬರುವಾಗ ಅಪಘಾತ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ನಿವಾಸಿಗಳು.
ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಎಮ್ಮೆಹಟ್ಟಿ ಗ್ರಾಮದ ಆದರ್ಶ, ವಿಶಲಾಕ್ಷಮ್ಮ, ನಾಗೇಶ್, ಭಾಗ್ಯಾ, ಮಾನಸ, ಸುಭದ್ರ, ಶಿವಮೊಗ್ಗ ನಗರದ ಆಲ್ಕೋಳ ನಿವಾಸಿಗಳಾದ ಪರಶುರಾಮ್ ಮತ್ತು ರೂಪ ದಂಪತಿ ಎಂದು ವರದಿಯಾಗಿದೆ.
ಇನ್ನು, ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಸರ್ಕಲ್ ಮಂಜುಳಾ ಬಾಯಿ, ಮಂಜುಳಾ, ಕಡೂರು ತಾಲೂಕಿನ ಬೀರೂರು ನಿವಾಸಿ ಅಂಜು, ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಪುಣ್ಯ ಬಾಯಿ ಮೃತರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















