ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ತರಲಘಟ್ಟದ ಬಳಿ ನಡೆದಿದೆ.
ನಿನ್ನೆ ತಡರಾತ್ರಿ ಘಟನೆ ಸಂಭವಿಸಿದ್ದು, ಮೃತ ದುರ್ದೈವಿಗಳನ್ನು ಪ್ರಸನ್ನ(27), ಕಾರ್ತಿಕ್(27) ಹಾಗೂ ಅಜಯ್(25) ಎಂದು ಗುರುತಿಸಲಾಗಿದೆ
ಮೃತರೆಲ್ಲರೂ ಜೋಗದ ನಿವಾಸಿಗಳು ಎಂದು ತಿಳಿದುಬಂದಿದೆ.
ಘಟನೆ ನಡೆದಿದ್ದು ಹೇಗೆ?
ಅಪಘಾತಕ್ಕೀಡಾದ ಆಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿಗೆ ತೆರಳುತ್ತಿತ್ತು. ಬೈಕ್ ಸವಾರರು ಶಿಕಾರಿಪುರದಲ್ಲಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ತರಲಘಟ್ಟದ ಬಳಿ ತಡರಾತ್ರಿ ಎರಡೂ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















