ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ರಾತ್ರಿ ವೇಳೆ ಮಣ್ಣಲ್ಲಿ ಹೂತಿದ್ದ ಮಗು ಬೆಳಗಾಗುವಷ್ಟರಲ್ಲಿ ಮರಕ್ಕೆ ಕಟ್ಟಿದ ಜೋಕಾಲಿಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಜರುಗಿದೆ.
ಮಂಠಾಳ ಗ್ರಾಮದ ನಿವಾಸಿ ಅಂಬಯ್ಯ ಸ್ವಾಮಿ ಅವರ ಒಂದೂವರೆ ವರ್ಷದ ಹೆಣ್ಣು ಮಗು ಶನಿವಾರ ಸಂಜೆ ಅನಾರೋಗ್ಯದಿಂದ ಮೃತಪಟ್ಟಿತ್ತು. ನಂತರ ತಡ ರಾತ್ರಿ 12ರ ಸುಮಾರಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಕೂಡಿ ಮಗುವಿಗೆ ಗ್ರಾಮದ ಪಕ್ಕದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ ಮನೆಗೆ ತೆರಳಿದ್ದರು.
Also read: ಶಿವಮೊಗ್ಗ | ಸುರಂಗ ಮಾರ್ಗ ನಿರ್ಮಾಣಕ್ಕೆ ಎಂಪಿ ರಾಘವೇಂದ್ರ ಕೇಂದ್ರಕ್ಕೆ ಮನವಿ | ಯಾವ ಪ್ರದೇಶದಲ್ಲಿ?
ಮಗು ಮಣ್ಣಲ್ಲಿ ಹೂತು ಮನೆಗೆ ಬಂದ ಪಾಲಕರು ಹಾಗೂ ಗ್ರಾಮಸ್ಥರಿಗೆ ಬೆಳಗಾಗುವಷ್ಟರಲ್ಲಿ ಆಶ್ಚರ್ಯ ಕಾದಿತ್ತು. ರಾತ್ರಿ ಸಮಯದಲ್ಲಿ ಮಣ್ಣಲ್ಲಿ ಹೂತಿದ್ದ ಮಗು, ಭಾನುವಾರ ಬೆಳಗ್ಗೆ ಮರಕ್ಕೆ ಬಟ್ಟೆಯಿಂದ ಕಟ್ಟಿದ ಜೋಕಾಲಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಪ್ರತ್ಯಕ್ಷಗೊಂಡಿದೆ. ಅಂತ್ಯ ಸಂಸ್ಕಾರ ಮಾಡಿದ್ದ ಮಗು, ಗುಂಡಿಯಿಂದ ಹೊರಗೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post