No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿದುಷಿ ಶಮಾ ಕೃಷ್ಣ ನೇತೃತ್ವದಲ್ಲಿ ಕಲಾಭಿವ್ಯಕ್ತಿಗೆ ಹೊಸ ಆಯಾಮ ತೆರೆದ “ನೃತ್ಯಾರ್ಣವ”

ಶ್ರದ್ಧಾ ನೃತ್ಯ ಸಂಸ್ಥೆ 14ನೇ ವಾರ್ಷಿಕೋತ್ಸವ ಸಂಪನ್ನ | ಪ್ರೇಕ್ಷಕ ವರ್ಗದಿಂದ ಮೆಚ್ಚುಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 2, 2024
in ಬೆಂಗಳೂರು ನಗರ
0
ವಿದುಷಿ ಶಮಾ ಕೃಷ್ಣ ನೇತೃತ್ವದಲ್ಲಿ ಕಲಾಭಿವ್ಯಕ್ತಿಗೆ ಹೊಸ ಆಯಾಮ ತೆರೆದ “ನೃತ್ಯಾರ್ಣವ”
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಗರದ ಶ್ರದ್ಧಾ ನೃತ್ಯ ಸಂಸ್ಥೆ 14ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಶ್ರದ್ಧಾ ನೃತ್ಯಾರ್ಣವ’ ವಿಶೇಷ ನೃತ್ಯೋತ್ಸವ ಕಲಾ ರಸಿಕರ ಮನಸೂರೆಗೊಂಡಿತು.

ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಉತ್ಸಾಹಿ ಕಲಾವಿದರಿಂದ ನೃತ್ಯ ಸಮರ್ಪಣೆಯಾಗಿದ್ದು ವಿಶೇಷ. ಇದುವೇ ‘ನೃತ್ಯಾರ್ಣವ’ದ ವಿಶೇಷ.
ದೇಶದ ಸುವಿಖ್ಯಾತ ರಚನೆಕಾರರ ಕೃತಿಗಳನ್ನು ಮೊದಲ ಹಂತದಲ್ಲಿ ನೃತ್ಯಾರ್ಣವಕ್ಕೆ ಸಮರ್ಥವಾಗಿ ಬಳಸಿಕೊಂಡು ಅದಕ್ಕೆ ತಕ್ಕಂತೆ ಚೇತೋಹಾರಿಯಾಗಿ ಯುವತಿಯರು ಹೆಜ್ಜೆ ಹಾಕಿದ್ದು ಗಮನ ಸೆಳೆಯಿತು. ಉತುಕ್ಕಾಡು ವೆಂಕಟಸುಬ್ಬಯ್ಯ ಅವರ ಆನಂದ ನರ್ತನ ಗಣಪತಿ, ತುಳಸೀ ದಾಸರ ಶ್ರೀ ರಾಮಚಂದ್ರ ಕೃಪಾಳು ಭಜಮನ, ಪದ್ಮಚರಣರ ಪ್ರದೋಷ ಸಮಯದಿ ಪರಶಿವ ತಾಂಡವ, ಪುರಂದರ ದಾಸರ ಭಾಗ್ಯದ ಲಕ್ಷ್ಮಿ ಬಾರಮ್ಮ – ಕೃತಿಗಳಿಗೆ ಸಂಸ್ಥೆಯ ಕಿರಿಯ ಕಲಾವಿದರು ನರ್ತಿಸಿ, ಪ್ರೇಕ್ಷಕ ವರ್ಗದಿಂದ ಸೈ ಎನಿಸಿಕೊಂಡಿದ್ದು ಗಮನಾರ್ಹ.

ನನ್ನ ಕನಸು, ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹಿರಿಯ ಮತ್ತು ಕಿರಿಯ ಶಿಷ್ಯರು ಸೂಕ್ತವಾಗಿ ಸ್ಪಂದಿಸಿದ್ದಾರೆ. ನೃತ್ಯ ರೂಪಕ ಪ್ರಸ್ತುತಿ ಸಂದರ್ಭ ಕಲಾವಿದರ ಪ್ರತಿ ಹೆಜ್ಜೆಯಲ್ಲೂ ಹೊಸತನ ಮೂಡಿದೆ. ಶ್ರದ್ಧಾ ನೃತ್ಯ ಸಂಸ್ಥೆ ಮೂಲಕ 14 ವರ್ಷ ನಾನು ನಡೆಸಿದ ನರ್ತನ ಕಲಾ ಬೋಧನೆ ಶಿಷ್ಯವರ್ಗದ ಮನಗಳನ್ನು ಮಥನ ಮಾಡಿ ಇಂದು ರಸಿಕ ಮಹೋದಯರಿಗೆ ಆತ್ಮಾನಂದವೆಂಬ ಅಮೃತಪಾನ ಮಾಡಿಸಿದೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಹೊಸ ಪ್ರಯೋಗಕ್ಕೆ ಅಣಿಯಾಗಲು ‘ನೃತ್ಯಾರ್ಣವ’ ಹೊಸ ಚೈತನ್ಯ ನೀಡಿದೆ.
-ವಿದುಷಿ ಶಮಾ ಕೃಷ್ಣ, ಹಿರಿಯ ಭರತನಾಟ್ಯ ಕಲಾವಿದೆ

ಕಲಾಭಿವ್ಯಕ್ತಿಗೆ ಹೊಸ ಆಯಾಮ
ಅಮೃತಕ್ಕಾಗಿ ಸುರ-ಅಸುರರು ಮಂದರ ಪರ್ವತವನ್ನೇ ಕ್ಷೀರಸಾಗರದಲ್ಲಿ ಕಡೆದ ‘ಅಮೃತ ಮಂಥನ’ ನೃತ್ಯ ರೂಪಕ ಕಲಾಭಿವ್ಯಕ್ತಿಗೆ ಹೊಸ ಆಯಾಮವನ್ನೇ ನೀಡಿತು. ಪುರಾಣದ ಕಥೆಯಲ್ಲಿ ಅಡಗಿರುವ ಒಳಾರ್ಥಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟು ವರ್ಣಿಸುವ ಉದ್ದೇಶವನ್ನು ಕಲಾವಿದರು ತಮ್ಮ ಅಭಿನಯದ ಮೂಲಕ ಸಫಲ ಮಾಡಿದರು.
ಮನದಲ್ಲೇ ಮಥನ
ಮಾನವನ ಮನಸ್ಸೇ ಕ್ಷೀರ ಸಾಗರ, ಒಳ್ಳೆಯ ಮತ್ತು ಕೆಟ್ಟ ಚಿಂತನೆಗಳೇ ಸುರ-ಅಸುರರು. ಈ ಚಿಂತನೆಗಳ ನಿರಂತರ ಕಾದಾಟದ ನಡುವೆ ಪ್ರತಿಯೊಬ್ಬರ ಮನದೊಳಗೂ ಸಮುದ್ರ ಮಥನ ನಡೆಯುತ್ತದೆ. ಮಾನವನ ಮುಖ್ಯ ಗುರಿಯೇ ಮೋಕ್ಷ ಎಂಬ ಅಮೃತವನ್ನು ಸಿದ್ಧಿಸಿಕೊಳ್ಳುವುದು. ಧರ್ಮದ ಹಾದಿಯನ್ನು ಪಾಲಿಸುವ ಸುರರಿಗೇ ಈ ಮೋಕ್ಷ ಎಂಬುವ ಅಮೃತ ಸಿಗುತ್ತದೆ ಎನ್ನುವ ಸಂದೇಶವನ್ನು ಮನಮುಟ್ಟುವ ರೀತಿಯಲ್ಲಿ ಈ ನೃತ್ಯ ರೂಪಕ ಪ್ರೇಕ್ಷಕರಿಗೆ ಉಣಬಡಿಸಿತು.

ಸಂಸ್ಥೆ ನಿರ್ದೇಶಕಿ ಶಮಾ ಕೃಷ್ಣ ಹಾಗು ಹಿರಿಯ ಕಲಾವಿದರಿಂದ ಅಮೃತ ಮಂಥನ ಎಂಬುವ ರಸಪೂರ್ಣ ನೃತ್ಯ ನಾಟಕದ ಪ್ರಸ್ತುತಿ ವಿಶೇಷವಾಗಿ ಮೂಡಿಬಂತು. ಇದಕ್ಕೆ ಶತಾವಧಾನಿ ಡಾ. ಆರ್. ಗಣೇಶ್‌ರ ಸಾಹಿತ್ಯ, ಕಲಾವಿದ ಪ್ರವೀಣ್ ಡಿ. ರಾವ್ ಸಂಗೀತ ಮತ್ತು ವಿದುಷಿ ಶಮಾ ಕೃಷ್ಣ ಅವರ ನೃತ್ಯ ಸಂಯೋಜನೆ ಸಮರ್ಥವಾದ ನ್ಯಾಯ ಒದಗಿಸಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
‘ಅಮೃತ ಮಥನ’ಕ್ಕೆ ಅಂದು ಸಾಕ್ಷಾತ್ ಶ್ರೀಹರಿಯೇ ಸೂತ್ರಧಾರನಾಗಿದ್ದ. ಇಂದು ಖ್ಯಾತ ಸಂಶೋಧಕಿ ಪ್ರೊ. ಕರುಣಾ ವಿಜಯೇಂದ್ರ, ಖ್ಯಾತ ನೃತ್ಯ ಪಟುಗಳಾದ ಶೇಷಾದ್ರಿ ಅಯ್ಯಂಗಾರ್ ಮತ್ತು ನವ್ಯಾ ನಟರಾಜ ಅವರು ಕಲಾ ರಸದೌತಣಕ್ಕೆ ಸಾಕ್ಷಿಯಾಗಿದ್ದು ಬಹು ವಿಶೇಷ.

ವಿಶೇಷ ಲೇಖನ: ಕೌಸಲ್ಯಾರಾಮ  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share233Tweet123Send
Previous Post

ವಿದ್ಯಾರ್ಥಿಗಳು ತಮ್ಮ ಕನಸು ನನಸಾಗಿಸಲು ಆತ್ಮವಿಶ್ವಾಸದಿಂದ ಶ್ರಮಿಸಬೇಕು: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

Next Post

ಶಿವಮೊಗ್ಗ | ಕುವೆಂಪು ನಗರದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ? ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡುವರೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಕುವೆಂಪು ನಗರದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ? ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡುವರೇ?

ಶಿವಮೊಗ್ಗ | ಕುವೆಂಪು ನಗರದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ? ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡುವರೇ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL