ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ #Ambegalu Shortfilm Compition ಆಯೋಜಿಸಲಾಗಿದೆ ಎಂದು ಬೆಳ್ಳಿಮಂಡಲ ಕಾರ್ಯಾಧ್ಯಕ್ಷ ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಡಿ.ಎಸ್. ಅರುಣ್ #D S Arun ಹೇಳಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ನಡೆದ ಅಂಬೆಗಾಲು ಕಿರುಚಿತ್ರ ಸ್ಪರ್ಧೆಗಳಲ್ಲಿ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಕ್ರಿಯಾಶೀಲ ನಿರ್ದೇಶಕರು, ತಂತ್ರಜ್ಞರು ಪಾಲ್ಗೊಂಡು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.

ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ 5 ರಿಂದ 7 ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದರು.

Also read: ವಿಶ್ವದಲ್ಲಿ ಮಾನವಶಕ್ತಿ ಉತ್ಪಾದಿಸುವ ಕೇಂದ್ರ ಭಾರತ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ ಅಭಿಪ್ರಾಯ
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,000 ರೂಗಳ ಪ್ರಥಮ ಬಹುಮಾನ, ರೂ. 30,000.00 ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5,000 ನಗದು ಆಕರ್ಷಣೀಯ ಸ್ಮರಣಿಕೆಗಳಿವೆ ಎಂದರು.

ಬೆಳ್ಳಿ ಮಂಡಲದ ವೈದ್ಯ ಮಾತನಾಡಿ, ಶಿವಮೊಗ್ಗದಲ್ಲಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ರಸಗ್ರಹಣ ಕಾರ್ಯಾಗಾರ ಹಾಗೂ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಚಿಂತನೆ ನಡೆಸಲಾಗಿದೆ. ಅಕ್ಟೋಬರ್ ಅಥವಾ ನವಂಬರ್‍ನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಮ್ಮಿಕೊಳ್ಳಲಾಗುವುದು. ಹಾಗೆಯೇ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಹಿನ್ನಲೆಯಲ್ಲಿ ಮತ್ತು ಶಿವಮೊಗ್ಗವನ್ನು ಒಂದು ಚಲನಚಿತ್ರ ಚಟುವಟಿಕೆಗಳ ಕೇಂದ್ರವನ್ನಾಗಿಸುವ ದೃಷ್ಟಿಯಿಂದ ಕಾರ್ಯಗಾರವನ್ನು ಆಯೋಜಿಸಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post