ಕಲ್ಪ ಮೀಡಿಯಾ ಹೌಸ್ | ಹತ್ರಾಸ್ |
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ #Stampede in religious program ಸಂಭವಿಸಿದ್ದು, 27 ಮಂದಿ ಸಾವನ್ನಪ್ಪಿರುವ
ಘಟನೆ ನಡೆದಿದೆ.
ಪುಲ್ರೈ ಗ್ರಾಮದಲ್ಲಿ ನಡೆದ ಭೋಲೆ ಬಾಬಾ ಸತ್ಸಂಗದಲ್ಲಿ ಈ ಘಟನೆ ನಡೆದಿದ್ದು, ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
Also read: ಶಿವಮೊಗ್ಗ: ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಜನದಟ್ಟಣೆಯಿಂದಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ #CM Yogi Adithyanath ಸಂತಾಪ ಸೂಚಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post