ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ಒಳಗೆ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ #Nitin Gadkari ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,, ಈ ಹೆದ್ದಾರಿಯಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಎರಡು ಗಂಟೆಗಳಲ್ಲಿ ತಲುಪಲು ಸಾಧ್ಯವಾಗುತ್ತದೆ. ನಾಲ್ಕು ಪಥದ ಬ್ರೌನ್ ಫೀಲ್ಡ್ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ #Bangalore-Chennai Express Way (ಬಿಸಿಇ) ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ ಎಂದರು.
ಸುಮಾರು 258 ಕಿ.ಮೀ ಉದ್ದದ ಈ ಎಕ್ಸ್ ಪ್ರೆಸ್ ವೇ ಕರ್ನಾಟಕದ ಮೂರು (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ), ಆಂಧ್ರಪ್ರದೇಶದ ಚಿತ್ತೂರು ಮತ್ತು ತಮಿಳುನಾಡಿನ ಮೂರು (ವೆಲ್ಲೂರು, ಕಾಂಚೀಪುರಂ ಮತ್ತು ತಿರುವಳ್ಳೂರು) ಸೇರಿದಂತೆ ಒಟ್ಟು ಏಳು ಜಿಲ್ಲೆಗಳನ್ನು ಹಾದುಹೋಗುತ್ತದೆ.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಪ್ರಸ್ತಾಪಿಸಿದ ಗಡ್ಕರಿ, ಸ್ಯಾಟಲೈಟ್ ಟೌನ್ಶಿಪ್ ರಿಂಗ್ ರಸ್ತೆ (ಎಸ್ಟಿಆರ್‌ಆರ್) ಅನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post