ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ ರಸ್ತೆ ಲಯನ್ ಸಫಾರಿ #Lion Safari ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಕೆಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಮುದ್ದಿನಕೊಪ್ಪದ ಬಳಿಯಲ್ಲಿ ಇನ್ನೋವಾ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿದೆ.
Also read: ಶಿವಮೊಗ್ಗದಲ್ಲಿ ಝಿಕಾ ವೈರಸ್’ಗೆ ವ್ಯಕ್ತಿ ಬಲಿ | ಸಾಗರದಲ್ಲೂ ಸಹ ಸೋಂಕು ಪತ್ತೆ?
ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಘಟನೆಯಲ್ಲಿ ಎರಡು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post