ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್’ನಲ್ಲಿ ನೇಣು ಬಿಗಿದುಕೊಂಡು #Nursing Student commit suicide in hostel ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ.
Also read: ಬೆಂಗಳೂರು | ಪ್ರತಿಷ್ಠಿತ ಕಾಲೇಜು ಮುಂದೆ ಹುಡುಗಿಯರ ಎದುರು ಪ್ಯಾಂಟ್ ಜಿಪ್ ತೆಗೆದು…
ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಈಗ ವ್ಯಾಸಂಗ ಮಾಡುತ್ತಿದ್ದಳು. ಮೂರು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದ್ದು, ತನಿಖೆಯಿಂದ ತಿಳಿದುಬರಬೇಕಿದೆ.
ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















