No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇಂದಿನಿಂದ ಮೂರು ದಿನ ಶ್ರೀ ವಿದ್ಯೇಶ ಸಪ್ತತಿ ವಿನೋದೋತ್ಸವ

ಬೆಂಗಳೂರಿನ ಗಿರಿನಗರದ ಭಂಡಾರ ಕೇರಿ ಮಠದಲ್ಲಿ ವಿಶೇಷ ಕಾರ್ಯಕ್ರಮ | 70 ಜನ ವಿದ್ವಾಂಸರಿಂದ ವೈವಿಧ್ಯ ಭರಿತ ಚೇತೋಹಾರಿ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 10, 2024
in ಬೆಂಗಳೂರು ನಗರ
0
ಇಂದಿನಿಂದ ಮೂರು ದಿನ ಶ್ರೀ ವಿದ್ಯೇಶ ಸಪ್ತತಿ ವಿನೋದೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜಧಾನಿಯ ಗಿರಿನಗರದಲ್ಲಿರುವ ಶ್ರೀ ಭಂಡಾರ ಕೇರಿ ಮಠದಲ್ಲಿ ಭಾಗವತಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾ ವಿಕಾಸ ಪ್ರತಿಷ್ಠಾನಗಳ ಸಂಯುಕ್ತ ಆಶಯದಲ್ಲಿ ಶ್ರೀ ಭಂಡಾರ ಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ 70ನೇ ವರ್ಧಂತಿ ಮಹೋತ್ಸವದ ಅಂಗವಾಗಿ 70 ಜನ ವಿದ್ವಾಂಸರಿಂದ ವೈವಿಧ್ಯಭರಿತ ಚೇತೋಹಾರಿ ಉಪನ್ಯಾಸ ಸರಣಿ ಆಯೋಜನೆ ಮಾಡಲಾಗಿದೆ.

ಮೂರು ದಿನಗಳ ಈ ಕಾರ್ಯಕ್ರಮಕ್ಕೆ ಬುಧವಾರ ಸಂಜೆ 5ಕ್ಕೆ ಚಾಲನೆ ದೊರಕಲಿದೆ. ಪರಮಪೂಜ್ಯ ಶ್ರೀ ವಿದೇಶ ತೀರ್ಥ ಸ್ವಾಮೀಜಿ ವಿನೋದೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.
ಜುಲೈ 10 , 11 ಮತ್ತು 12ರಂದು ಮೂರು ದಿನಗಳ ಕಾಲ ನಾಡಿನ ಪ್ರಖ್ಯಾತ ವಿದ್ವಾಂಸರು ಪ್ರವಚನಗಳನ್ನು ನೀಡಲಿರುವುದು ವಿಶೇಷ.

ಬುಧವಾರ ಸಂಜೆ ನಡೆಯುವ ಪ್ರಥಮ ಗೋಷ್ಠಿಯಲ್ಲಿ ಹಿರಿಯ ವಿದ್ವಾಂಸರಾದ ಶ್ರೀಕರಾಚಾರ್ಯ ತಾಮ್ರಪರಣಿ, ವಿಜಯನಂದನ ಆಚಾರ್ಯ, ಶ್ರೀ ವರಾಹ ಆಚಾರ್ಯ ತಾಮ್ರಪರಣಿ, ಮಾಳಗಿ ರಾಮಾಚಾರ್ಯ , ಗುರುಪ್ರಸಾದ ಆಚಾರ್ಯ ವಿಕ್ರಮ ಸಿಂಹಾಚಾರ್ಯ ಸತ್ತಿಗೇರಿ ವಾಸುದೇವಾಚಾರ್ಯ, ಅನಂತಶಯನ ಆಚಾರ್ಯ, ಸೋಶೀಲೆಂದ್ರ ಆಚಾರ್ಯ ಗೋಗಿ , ರಂಗನಾಥಾಚಾರ್ಯ ಗಣಾಚಾರಿ, ರಘುಪತಿ ಉಪಾಧ್ಯಾಯ, ಮಾದನೂರು ಪವಮಾನ ಆಚಾರ್ಯ ಸಂಜೀವ ಆಚಾರ್ಯ ದೇಶಪಾಂಡೆ , ಮಾಧವ ಆಚಾರ್ಯ ಮೈಸೂರು ಮತ್ತು ಜೀವೇಶ ಆಚಾರ್ಯ ಇವರುಗಳು ವಿವಿಧ ವೈದಿಕ, ಧಾರ್ಮಿಕ, ರಾಮಾಯಣ, ಮಹಾಭಾರತ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಜುಲೈ 11ರ ಬೆಳಗ್ಗೆ 9ಕ್ಕೆ ಎರಡನೇ ಗೋಷ್ಠಿ ಆಯೋಜನೆಗೊಂಡಿದ್ದು ಇದರಲ್ಲಿ ವಿದ್ವಾಂಸರಾದ ಹನುಮಂತಾಚಾರ್ಯ, ಭೀಮಸೇನಾಚಾರ್ಯ, ರಾಘವೇಂದ್ರ ಆಚಾರ್ಯ, ಕಿರಣ ಆಚಾರ್ಯ, ಸಂದೇಶ ಆಚಾರ್ಯ ಮತ್ತಿತರರು ವಿಷ್ಣುವಿನ ಮೋಕ್ಷಪ್ರದಾ, ಶರಣಾಗತಿ, ಶ್ರೀರಾಮನ ಜೀವನ ಮೌಲ್ಯಗಳು, ಲಿಂಗ ದೇಹದ ಸ್ವರೂಪ, ಸತ್ಯ ಧರ್ಮಗಳ ಉದಾತ್ತ ಮುಖ ಇತ್ಯಾದಿ ವಿಚಾರಗಳನ್ನು ಮಂಡನೆ ಮಾಡಲಿದ್ದಾರೆ
ಮೂರನೇ ಗೋಷ್ಠಿ:
ಜುಲೈ 11 ರಂದು ಸಂಜೆ 4:30ಕ್ಕೆ ನಡೆಯುವ ಮೂರನೇ ಗೋಷ್ಠಿಯಲ್ಲಿ ವಿದ್ವಾಂಸರಾದ ಪವಮಾನಾಚಾರ್ಯ, ಪಾಂಡುರಂಗ ಆಚಾರ್ಯ, ಪಾಂಡುರಂಗಿ ಗೋಟೆ, ನರಸಿಂಹಾಚಾರ್ಯ, ಯದುನಂದನ ಆಚಾರ್ಯ ಮತ್ತಿತರರು ಮಾತನಾಡಲಿದ್ದಾರೆ.

Also read: ‘ಸಾಹಿತ್ಯ ಸಹವಾಸ’ ವಿಚಾರ ಸಂಕಿರಣ ನಿಮಿತ್ತ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ವಿಚಾರ ಲಹರಿ:
ಜುಲೈ 12ರ ಬೆಳಗ್ಗೆ 9ಕ್ಕೆ 4ನೇ ಗೋಷ್ಠಿಯಲ್ಲಿ ಹಿರಿಯ ಪಂಡಿತರಾದ ಜಯತೀರ್ಥಾಚಾರ್ಯ, ವೆಂಕಟೇಶ ಆಚಾರ್ಯ, ಪಡುಬಿದ್ರಿ ಪ್ರವೀಣ ಆಚಾರ್ಯ ತಂತ್ರಿ, ಚತುರ್ವೇದಿ ವೇದವ್ಯಾಸಾಚಾರ್ಯ, ಗುರುರಾಜ ಆಚಾರ್ಯ ಮತ್ತಿತರರು ಧರ್ಮಾಚರಣೆ, ಅಷ್ಟಮಂಗಳ ಶಕುನಗಳು, ಮಹಾಭಾರತ, ಪದ್ಮಪುರಾಣ ಇತ್ಯಾದಿ ವಿಷಯಗಳ ಬಗ್ಗೆ ತಮ್ಮ ಲಹರಿಯನ್ನು ಹರಿಸಲಿದ್ದಾರೆ

ಸಮಾರೋಪದಲ್ಲಿ ಶಿಖರೋಪನ್ಯಾಸ:
ಶುಕ್ರವಾರ ಸಂಜೆ 4:50ಕ್ಕೆ ವಿನೋದೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಆಯೋಜನೆಗೊಂಡಿದೆ ಭಂಡಾರ ಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ, ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯ ನಿಧಿ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ವಿಷಯ ತಜ್ಞರಾದ ಸಮೀರ ಕಾಗಲ್ಕರ್ ಅವರು ಮಾಧ ಸಮಾಜದ ಕುಂದು ಕೊರತೆಗಳು ಹಾಗೂ ಪರಿಹಾರ ಉಪಾಯಗಳು- ವಿಷಯ ಕುರಿತು ಮಾತನಾಡಲಿದಿದ್ದಾರೆ . ಪತ್ರಕರ್ತ ಮತ್ತು ಲೇಖಕ ಎ. ಆರ್. ರಘುರಾಮ ಅವರು ಮಾಧ್ಯಮವು ಉದ್ಯಮ ಪ್ರಭಾವದಿಂದ ಸಮಾಜವನ್ನು ಅರಳಿಸುವುದರಲ್ಲಿ ಎಡವಿದೆಯೇ – ಎಂಬ ವಿಷಯ ಕುರಿತು ಶಿಖಾರೋಪನ್ಯಾಸ ಮಾಡಲಿದ್ದಾರೆ.

ಡಾ. ಶ್ರೀನಿಧಿ ವಸಿಷ್ಠ ಅಭಿನಂದನಾ ಭಾಷಣವನ್ನು ಮಾಡದಿದ್ದಾರೆ. ಇದೇ ಸಂದರ್ಭ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರ ವರ್ಧಂತಿಯ ಅಂಗವಾಗಿ ಶ್ರೀ ಧನ್ವಂತರಿ ಹೋಮದ ಪೂರ್ಣಹುತಿ ಮತ್ತು 70 ಜನ ವಿದ್ವಾಂಸರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಭಂಡಾರಕೇರಿ ಮಠ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                                   

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share199Tweet123Send
Previous Post

‘ಸಾಹಿತ್ಯ ಸಹವಾಸ’ ವಿಚಾರ ಸಂಕಿರಣ ನಿಮಿತ್ತ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

Next Post

ವಿದ್ಯಾರ್ಥಿಗಳಿಗೆ ತಾಂತ್ರಿಕ ಬದಲಾವಣೆಗಳ ಅರಿವು ಅಗತ್ಯ: ನಾಗರಾಜ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳಿಗೆ ತಾಂತ್ರಿಕ ಬದಲಾವಣೆಗಳ ಅರಿವು ಅಗತ್ಯ: ನಾಗರಾಜ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ತಾಂತ್ರಿಕ ಬದಲಾವಣೆಗಳ ಅರಿವು ಅಗತ್ಯ: ನಾಗರಾಜ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL