No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ದಾಖಲೆಗಾಗಿ ಅಷ್ಟೇ ಐಪಿ ಸೆಟ್ RR ನಂಬರ್’ಗಳಿಗೆ ಅಧಾರ್ ಜೋಡಣೆ: ಸಚಿವ ಜಾರ್ಜ್

ಪರ್ಯಾಯ ವ್ಯವಸ್ಥೆವರೆಗೆ 10 ಎಚ್.ಪಿ. ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಇಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 13, 2024
in ಬಳ್ಳಾರಿ
0
Linking Aadhaar to IP Set RR Numbers for record-keeping states Energy Minister K.J. George
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ರಾಜ್ಯದಲ್ಲಿ ಐಪಿ ಸೆಟ್‌ ಆರ್‌.ಆರ್‌. ನಂಬರ್‌ಗೆ ಆಧಾರ್‌ ಸಂಖ್ಯೆ ಲಿಂಕ್‌ ಮಾಡುತ್ತಿರುವುದು ದಾಖಲಾತಿಗಾಗಿ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ #K J George ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, ಐಪಿ ಸೆಟ್ ಗಳ ಸಂಖ್ಯೆ ತಿಳಿದುಕೊಂಡು ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್ ಗಳ ಆರ್.ಆರ್. ನಂಬರ್ ಗೆ ಆಧಾರ್ ಸಂಖ್ಯೆ ಜೋಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
“ರಾಜ್ಯದಲ್ಲಿ 10 ಎಚ್.ಪಿ.ವರೆಗಿನ ಕೃಷಿ ಪಂಪ್ ಸೆಟ್ ಗಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ಗೊಂದಲ ಉಂಟಾಗುತ್ತಿದೆ. ಅಕ್ರಮ ಪಂಪ್ ಸೆಟ್ ಗಳಿಂದಾಗಿ ಸಕ್ರಮ ಪಂಪ್ ಸೆಟ್ ಗಳಿಗೂ ವಿದ್ಯುತ್ ಸಮಸ್ಯೆಯಾಗುತ್ತಿದೆ. ಐಪಿ ಸೆಟ್ ಗಳ ಆರ್.ಆರ್. ನಂಬರ್ ಗಳಿಗೆ ಆಧಾರ್ ಜೋಡಣೆ ಮಾಡಿದರೆ ಎಷ್ಟು ಪಂಪ್ ಸೆಟ್ ಗಳಿವೆ ಮತ್ತು ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಸ್ಪಷ್ಟತೆ ಸಿಗುತ್ತದೆ. ಅದಕ್ಕೆ ತಕ್ಕಂತೆ ಸಮರ್ಪಕ ವಿದ್ಯುತ್ ಪೂರೈಸಲು ಅನುಕೂಲವಾಗುತ್ತದೆ”, ಎಂದು ತಿಳಿಸಿದರು.

“ಬರಗಾಲದ ಸಂದರ್ಭದಲ್ಲೂ ರಾಜ್ಯದ ರೈತರಿಗೆ ದಿನದ ಏಳು ಗಂಟೆ ವಿದ್ಯುತ್ ಪೂರೈಸಲಾಗಿದೆ. ಲೋಡ್ ಶೆಡ್ಡಿಂಗ್ ಮಾಡಿಲ್ಲ. ಭವಿಷ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಲಭ್ಯವಿರುತ್ತದೆ. ಆದರೂ ಬೇರೆ ಬೇರೆ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಈ ಸಮಸ್ಯೆ ಬಗೆಹರಿಸಿ ಸಮರ್ಪಕ ವಿದ್ಯುತ್ ಪೂರೈಕೆ ಉದ್ದೇಶದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇನೆ”, ಎಂದು ಹೇಳಿದರು.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಅಕ್ರಮ ಐಪಿ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು. ಅದಕ್ಕಿಂತ ಹೆಚ್ಚು ಅಂತರವಿರುವ ಕಡೆಗಳಲ್ಲಿ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ. 30 ಮತ್ತು ರಾಜ್ಯ ಸರ್ಕಾರದಿಂದ ಶೇ. 50 ಸಬ್ಸಿಡಿ ನೀಡಲಾಗುತ್ತದೆ. ರೈತರು ಶೇ. 20ರಷ್ಟು ಮೊತ್ತ ಭರಿಸಿ ಪಂಪ್ ಸೆಟ್ ಹಾಕಿಸಿಕೊಳ್ಳಬಹುದು”, ಎಂದು ತಿಳಿಸಿದರು.

ವರ್ಗಾವಣೆ ತಡೆಗಟ್ಟಲು ಏಕಕಾಲದಲ್ಲಿ ಲೈನ್ ಮೆನ್ ಗಳ ನೇಮಕ
“ರಾಜ್ಯದಲ್ಲಿ 2000 ಲೈನ್ ಮೆನ್ ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್ ಮೆನ್ ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್ ಮೆನ್ ಗಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್ ಮೆನ್ ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುವುದು”, ಎಂದರು.
“ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಆಯಾ ಜಿಲ್ಲೆಯ ಎಸ್ಕಾಂ ಮುಖ್ಯ ಎಂಜಿನಿಯರ್ ಗಳನ್ನು ಒಳಗೊಂಡಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. ಈ ಹಿಂದೆ ಸೂಚನೆ ನೀಡಿದ್ದರೂ ಕೆಲವರು ಸಭೆ ಕರೆದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಸಭೆಗಳನ್ನು ತಪ್ಪದೆ ಕರೆಯುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ”, ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಕಂಪ್ಲಿ ಗಣೇಶ್, ಬಿ.ಎಂ.ನಾಗರಾಜ್, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: BallaryK J GeorgeKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಕೆ.ಜೆ. ಜಾರ್ಜ್ಬಳ್ಳಾರಿ
Share197Tweet123Send
Previous Post

ರಾಜ್ಯದ ಕೆರೆಗಳ ಮೇಲೆ ಪ್ಲೋಟಿಂಗ್ ಸೋಲಾರ್ ಪ್ಯಾನೆಲ್’ಗೆ ಚಿಂತನೆ | ಏನಿದು? ಹೇಗೆ ಕಾರ್ಯ ನಿರ್ವಹಿಸುತ್ತದೆ?

Next Post

ಕೃಷಿಗೆ ಆದ್ಯತೆಯಿಂದ ದೇಶದ ಸಮಗ್ರ ಅಭಿವೃದ್ಧಿ: ಸಚಿವ ಚಲುವರಾಯಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃಷಿಗೆ ಆದ್ಯತೆಯಿಂದ ದೇಶದ ಸಮಗ್ರ ಅಭಿವೃದ್ಧಿ: ಸಚಿವ ಚಲುವರಾಯಸ್ವಾಮಿ

ಕೃಷಿಗೆ ಆದ್ಯತೆಯಿಂದ ದೇಶದ ಸಮಗ್ರ ಅಭಿವೃದ್ಧಿ: ಸಚಿವ ಚಲುವರಾಯಸ್ವಾಮಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL