ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಮಲೆನಾಡು #Malnad ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಆಗುಂಬೆಯಲ್ಲಿ ವರುಣನ ಅಬ್ಬರಕ್ಕೆ ಗುಡ್ಡ ಕುಸಿದು ತೊಂದರೆ ಉಂಟಾಗಿದೆ.
ಆಗುಂಬೆ ಘಾಟಿಯ #AgumbeGhat ನಾಲ್ಕನೇ ತಿರುವಿನಲ್ಲಿ ಇಂದು ಗುಡ್ಡ ಕುಸಿದಿದ್ದು, ಈಗಾಗಲೇ ಮಣ್ಣು ತೆರವುಗೊಳಿಸಲಾಗಿದೆ.
ರಸ್ತೆ ಮೇಲೆ ಗುಡ್ಡ ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಗಿತ್ತು. ಮಳೆ ಮುಂದುವರೆದಿರುವ ಹಿನ್ನೆಲೆ ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇದೆ. ಇಂದು ಭಾನುವಾರವೂ ಸಹ ಆಗಿರುವುದರಿಂದ ವಾಹನ ಸಂಚಾರ ಹೆಚ್ಚಾಗಿರುವುದು ಕಂಡುಬಂದಿದೆ.
ಆಗುಂಬೆ #Agumbe ಪಿಎಸ್’ಐ ರಂಗನಾಥ್ ಅವರ ನೇತೃತ್ವದಲ್ಲಿ ರಸ್ತೆ ಮೇಲೆ ಕುಸಿದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಮಲೆನಾಡು-ಕರಾವಳಿ ಭಾಗಕ್ಕೆ ಸಂಚರಿಸುವ ವಾಹನಗಳಿಗೆ ತೊಂದರೆ ಉಂಟಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















