ಕಲ್ಪ ಮೀಡಿಯಾ ಹೌಸ್ | ಕುಕ್ಕೆ ಸುಬ್ರಹ್ಮಣ್ಯ(ಪುತ್ತೂರು) |
ರಾಜ್ಯದ ಕರಾವಳಿ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಬೆನ್ನಲ್ಲೇ ಕುಕ್ಕೆ ಸುಬ್ರಹ್ಮಣ್ಯದ #Kukke Subrahmanya ಕುಮಾರಧಾರಾ ಸ್ನಾನಘಟ್ಟ ಈ ಬಾರಿ ಎರಡನೇ ಬಾರಿ ಮುಳುಗಡೆಯಾಗಿದೆ.
ರಾಜ್ಯದ ಸುಪ್ರಸಿದ್ದ ನಾಗದೇವರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣದ ಕುಮಾರಧಾರಾ ನದಿ #Kumaradhara river ತುಂಬಿ ಹರಿಯುತ್ತಿದೆ. ಪರಿಣಾಮವಾಗಿ ಸ್ನಾನಘಟ್ಟ ಮುಳುಗಡೆಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಸ್ನಾನಘಟ್ಟಕ್ಕೆ ಯಾತ್ರಾರ್ಥಿಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ಸೆಕ್ಯೂರಿಟಿ ಹಾಗೂ ಹೋಮ್ ಗಾರ್ಡ್’ಗಳನ್ನು ನಿಯೋಜಿಸಲಾಗಿದೆ.
Also read: ಭರ್ಜರಿ ಕಾರ್ಯಾಚರಣೆ | ಡ್ಯಾಷ್ ಬೋರ್ಡ್’ನಲ್ಲಿಟ್ಟಿದ್ದ 1.5 ಲಕ್ಷ ರೂ. ಕಳ್ಳತನ ಮಾಡಿದ್ದ ಆರೋಪಿ ಅಂದರ್
ಸ್ನಾನಘಟ್ಟ ಮುಳುಗಡೆಯಾದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳಿಗೆ ತೀರ್ಥಸ್ನಾನ ನೆರವೇರಿಸಲು ತೊಂದರೆಯಾಗಿದ್ದು, ನದಿ ನೀರನ್ನು ಡ್ರಮ್ ಮೂಲಕ ಸಂಗ್ರಹಿಸಿ ಭಕ್ತರಿಗೆ ತೀರ್ಥಸ್ನಾನಕ್ಕೆ ಅವಕಾಶ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ.
ಈಗಾಗಲೇ ಹವಮಾನ ಇಲಾಖೆ ಬಾರಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಿದೆ. ಈ ನಡುವೆ ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿರುವ ಹಿನ್ನೆಲೆ ಕರಾವಳಿಯ ನದಿಗಳು ತುಂಬಿ ಹರಿಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post