ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿಗೆ ಹಸಿರು ನಿಶಾನೆ ತೋರಿದೆ.
ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಮುಂಗಾರಿನ ಉಡುಗೊರೆ ನೀಡಿದೆ.
Also read: ಕಟ್ಟಡ ಸೋರುವ ಕುರಿತು ಸಚಿವ ಮಧು ಹೇಳಿಕೆ | ಆಯನೂರು ಮಂಜುನಾಥ್ ಸ್ಪಷ್ಟನೆಯೇನು?
ಇನ್ನು, 7ನೇ ವೇತನ ಆಯೋಗದ ವರದಿ ಆಗಸ್ಟ್ 1ರಿಂದಲೇ ಜಾರಿಗೆ ಬರುವಂತೆ ನಿರ್ಧಾರ ಕೈಗೊಳ್ಳಲಾಗಿದೆ.
7ನೇ ವೇತನ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರಿ ನೌಕರರು ಒತ್ತಾಯಿಸಿದ್ದರು. ತಮ್ಮ ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ಕೆಲಸಕ್ಕೆ ಗೈರಾಗಿ ಜುಲೈ 29ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಇಂದಿನ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post