ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಗಾಳಿ ಮಳೆಯ ಅಬ್ಬರಕ್ಕೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ ಮಾರ್ಗದಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
Also read: ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ತೇಲಿಬಂತಾ ಆನೆಯ ಮೃತದೇಹ?
ಹೊಸನಗರ ತಾಲೂಕಿನ ಹಳಗುಂದ ಗ್ರಾಮದ ಬಳಿ ಮುಂಜಾನೆ ನಾಲ್ಕು ಗಂಟೆ ವೇಳೆಗೆ ಮರ ಬಿದ್ದಿದ್ದು, ಮಂಗಳೂರು, ಉಡುಪಿ, ಕುಂದಾಪುರ ಮಣಿಪಾಲ ತೆರಳಲು ವಾಹನ ಸವಾರರು ಪರದಾಡುವಂತಾಯಿತು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















