ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾನವನ ಹಸ್ತಕ್ಷೇಪ ಕಡಿಮೆ ಮಾಡಿ, ಸಂಪೂರ್ಣ ವಾತಾವರಣವನ್ನು ಆಟೊಮೇಷನ್ ಮಾಡುವಂತಹ ಶಕ್ತಿ ಕೃತಕ ಬುದ್ಧಿಮತ್ತೆ (ಆರ್ಟಿಫೀಷಿಯಲ್ ಇಂಟಲಿಜೆನ್ಸ್) ತಂತ್ರಜ್ಞಾನಕ್ಕಿದೆ #AI Technology ಎಂದು ಖ್ಯಾತ ಸಂಶೋಧಕ, ಮೈಸೂರು ವಿವಿ ಪ್ರಾಧ್ಯಾಪಕರಾದ ಡಾ.ಡಿ.ಎಸ್. ಗುರು ಅಭಿಪ್ರಾಯಪಟ್ಟರು.
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ #JNNCE ಎಂಸಿಎ ವಿಭಾಗದ ವತಿಯಿಂದ ಸೋಮವಾರ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೃತಕ ಬುದ್ದಿಮತ್ತೆ ಮತ್ತು ಐಓಟಿ ತಂತ್ರಜ್ಞಾನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಅದರಂತೆ ಆಧುನಿಕತೆಯ ಯುಗದಲ್ಲಿ ಮತ್ತಷ್ಟು ಲಾಭದಾಯಕ ಅನ್ವೇಷಣೆಗಳಿಗೆ ತಂತ್ರಜ್ಞಾನಗಳು ಸ್ಪಂದಿಸುತ್ತಿದ್ದು, ಯಾಂತ್ರೀಕೃತ ವಾತಾವರಣ ನಿರ್ಮಾಣ ಮಾಡಿ ಕಡಿಮೆ ಶ್ರಮದೊಂದಿಗೆ ಹೆಚ್ಚು ಲಾಭ ನೀಡುವಂತಹ ವಿಸ್ಮಯ ಎಐ ತಂತ್ರಜ್ಞಾನದಿಂದ ಸಾಧ್ಯ ಎಂದರು.

Also read: ತೀರ್ಥಹಳ್ಳಿ | ಅಪಾಯದ ಮಟ್ಟದತ್ತ ತುಂಗಾ ನದಿ | ರಾಮಮಂಟಪ ಮುಳುಗಡೆಗೆ ಕೆಲವೇ ಅಡಿ ಬಾಕಿ
ಸಮಾಜಮುಖಿ ಯೋಚನೆಗಳಿಂದ ತಾಂತ್ರಿಕ ಸಾಧನೆಗಳನ್ನು ಮತ್ತಷ್ಟು ಸ್ಮಾರ್ಟ್ ಮಾಡಲು ಪ್ರಯತ್ನಿಸಿ. ಸಂಶೋಧನಾ ಲೇಖನಗಳು ಪ್ರಸ್ತುತತೆಗೆ ಸೀಮಿತವಾಗದೆ, ಭವಿಷ್ಯದ ಉನ್ನತಿಕರಣಕ್ಕೆ ಅನುಗುಣವಾಗಿ ಮಾರ್ಪಾಟು ಮಾಡಲು ಪ್ರಯತ್ನಿಸಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಖ್ಯಾತ ಸಂಶೋಧಕ ಮಂಗಳೂರು ವಿವಿ ಪ್ರಾಧ್ಯಾಪಕ ಡಾ.ಶೇಖರ್.ಬಿ.ಹೆಚ್ ಮಾತನಾಡಿದರು. ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜಿ.ಪಿ.ಸುನಿತ, ಕಾರ್ಯಕ್ರಮ ಸಂಯೋಜಕ ಸಂಪತ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post