ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಶಾಢ ಶುದ್ಧ ಪ್ರಥಮ ಏಕಾದಶೀ ಪ್ರಯುಕ್ತ ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ #Subhudhendra Shri of Mantralaya Raghavendra Swamy Mutt ತಪ್ತ ಮುದ್ರಾಧಾರಣೆ ನಡೆಯಲಿದೆ.
ಜಗದ್ಗುರು ಶ್ರೀಮನ್ ಮದ್ವಾಚಾರ್ಯಮೂಲ ಮಹಾಸಂಸ್ಥಾನದೀಶ್ವರರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪ್ರಸ್ತುತ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಮನ್ ಮೂಲ ರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಲಿದ್ದಾರೆ.
Also read: ಎಐ ತಂತ್ರಜ್ಞಾನದಿಂದ ಕಡಿಮೆ ಶ್ರಮದೊಂದಿಗೆ ಹೆಚ್ಚು ಲಾಭ ಸಾಧ್ಯ: ಡಾ.ಡಿ.ಎಸ್. ಗುರು
ನಂತರ, ಶ್ರೀಸುದರ್ಶನ ಹೋಮದೊಂದಿಗೆ ತಾವು ತಪ್ತ ಮುದ್ರಾಧಾರಣೆಯನ್ನು #Thaptha Mudradharane ಸ್ವೀಕರಿಸಿ ತದನಂತರ ಶ್ರೀಮಠದ ಶಿಷ್ಯರಿಗೆ ಬೆಳಗ್ಗೆ 7:30 ರಿಂದ ರಾತ್ರಿ 9:30 ವರೆಗೆ ನಿರಂತರವಾಗಿ ತಪ್ತ ಮುದ್ರಾ ಧಾರಣೆಯನ್ನು ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಮಠದ ಪಂಡಿತರಿAದ ಉಪನ್ಯಾಸ ಮಾಲಿಕೆಯು ನೆರವೇರಲಿದೆ ಎಂದು ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರ ಆಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post