ಕಲ್ಪ ಮೀಡಿಯಾ ಹೌಸ್ | ಉಪ್ಪಿನಂಗಡಿ |
ಒಂದೆಡೆ ಮಳೆಯ ಅಬ್ಬರ ಹೆಚ್ಚಾಗಿದ್ದರೆ ಇನ್ನೊಂದೆಡೆ ಉಪ್ಪಿನಂಗಡಿ ಬಳಿಯಲ್ಲಿ ಕೆಎಸ್’ಆರ್’ಟಿಸಿ ಐರಾವತ ಬಸ್’ನಲ್ಲಿ #KSRTC Airawatha Bus ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಡಿದ್ದು, ಸ್ಥಳೀಯ ಯುವಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.
ಉಪ್ಪಿನಂಗಡಿಯ ಹಳೆಗೇಟು ಬಳಿಯಲ್ಲಿ ಇಂದು ಮುಂಜಾನೆ ಈ ಅವಘಡ ಸಂಭವಿಸಿದ್ದು, ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದೆ.
Also read: ಮಳೆ ಎಂದು ಚಿಕ್ಕಮಗಳೂರು ಜಿಲ್ಲೆಗೆ ಟ್ರಿಪ್ ಪ್ಲಾನ್ ಮಾಡ್ತಿದಿರಾ? ಹಾಗಾದರೆ ಈ ಸುದ್ದಿ ಓದಿ
ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದರು. ಕೊಡಲೇ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ತತಕ್ಷಣ ಅಲ್ಲಿದ್ದ ಕೆಲವು ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post