ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ #Heavy rain ಸುರಿಯುತ್ತಿರುವುದರಿಂದ ಇಲ್ಲಿನ ಗಾಜನೂರಿನ ತುಂಗಾ ಜಲಾಶಯಕ್ಕೆ ಈ ಮುಂಗಾರು ಹಂಗಾಮಿನಲ್ಲಿ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 71,864 ಕ್ಯುಸೆಕ್ಸ್ ಒಳಹರಿವು ದಾಖಲಾಗಿದೆ.
588.24 ಮೀಟರ್, 3.24 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಜಲಾಶಯದ 22 ಕ್ರಸ್ಟ್ ಗೇಟ್’ಗಳನ್ನು ತೆರೆದು ತುಂಗಾ ನದಿಗೆ 73,391 ಕ್ಯುಸೆಕ್ಸ್ ನೀರು ಹರಿಸಲಾಗುತ್ತಿದೆ.
Also read: ಉತ್ತರ ಪ್ರದೇಶದಲ್ಲಿ ಭೀಕರ ದುರಂತ | ಹಳಿ ತಪ್ಪಿದ ರೈಲು | ನಾಲ್ವರ ದುರ್ಮರಣ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post