ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾನು ಗುತ್ತಿಗೆದಾರನೂ ಅಲ್ಲ, ಮೇಸ್ತ್ರಿಯೂ ಅಲ್ಲ ಶಾಸಕ ಎಂದು ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ #Araga Gnanendra ಹೇಳಿದರು.
ಅವರು ಇಂದು ತುಂಗಾ ಜಲಾಶಯಕ್ಕೆ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತೀರ್ಥಹಳ್ಳಿಯ ಸರ್ಕಾರಿ ಕಟ್ಟಡಗಳು ಸೋರುತ್ತಿವೆ. ಕಳಪೆಯಾಗಿದೆ ಎಂಬ ಆರೋಪವಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಗುತ್ತಿಗೆದಾರನ್ನು ಅಲ್ಲ, ಮೇಸ್ತ್ರಿಯೂ ಅಲ್ಲ, ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕೆಲವು ಕಟ್ಟಡಗಳು ಲೀಕೇಜ್ ಆಗುವುದು ಸಹಜವಾಗಿದೆ. ಹಾಗಂತ ಎಲ್ಲಾ ಕಟ್ಟಡಗಳು ಸೋರುತ್ತಿಲ್ಲ. ಎಲ್ಲವೂ ಸುರಕ್ಷಿತವಾಗಿಯೇ ಇವೆ. ರಾಜಕಾರಣಕ್ಕಾಗಿ ಆರೋಪ ಮಾಡುವುದು ಸರಿಯಲ್ಲ ಎಂದರು.

Also read: ಮಲೆನಾಡಿನಲ್ಲಿ ನಿರಂತರ ಮಳೆ | ಜಲಾಶಯಗಳ ಒಳಹರಿವು ಹೆಚ್ಚಳ | ನೀರಿನ ಮಟ್ಟ ಎಷ್ಟಿದೆ?
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಚಾರದ ಕುರಿತು ಪ್ರತಿಕ್ರಿಯಿಸಿದ ಅವರು ಡೆತ್‍ನೋಟ್‍ನಲ್ಲಿ ಸಚಿವರ ಹೆಸರು ಉಲ್ಲೇಖವಾಗಿದ್ದರೂ ಕೂಡ ಎಫ್‍ಐಆರ್‍ನಲ್ಲಿ ದಾಖಲಾಗಿಲ್ಲ. ಸರ್ಕಾರ ಅವರನ್ನು ರಕ್ಷಣೆ ಮಾಡಲು ಹೊರಟಿದೆ. ಎಸ್.ಐ.ಟಿ. ಸಂಸ್ಥೆ ರಾಜ್ಯ ಸರ್ಕಾರದ್ದೇ ಆಗಿದೆ. ಸತ್ಯ ಹೇಗೆ ಹೊರಬರಲು ಸಾಧ್ಯ. ವಾಲ್ಮೀಕಿ ನಿಗಮದ ಹಣ ಬಳ್ಳಾರಿಯ ಚುನಾವಣೆಗೆ ಬಳಕೆಯಾಗಿದೆ ಎಂದು ಈಗಾಗಲೇ ಇಡಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಶಾಸಕ ಚನ್ನಬಸಪ್ಪ ಮಾತನಾಡಿ, ತುಂಗ ನದಿ ಜೀವನಾಡಿ , ಇಲ್ಲಿ ಹೆಚ್ಚು ನೀರು ಸಂಗ್ರಹವಾಗಬೇಕಾಗಿದೆ, ಆದರೆ ಜಲಾಶಯ ಹೂಳು ತುಂಬಿಕೊಂಡಿದೆ. ಈ ಬಗ್ಗೆ ಮೂರು ಬಾರಿ ಚರ್ಚೆ ಮಾಡಿದ್ದೇವೆ. ಹೂಳು ತೆಗೆಯಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಇದಕ್ಕೆ ಹಣದ ಅವಶ್ಯಕತೆ ಇದೆ. ಹೂಳು ತೆಗೆದರೆ ನೀರು ಜಾಸ್ತಿ ನಿಲ್ಲಬಹುದಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post