ಕಲ್ಪ ಮೀಡಿಯಾ ಹೌಸ್ | ಹಾಸನ |
ಹೇಮಾವತಿ ಜಲಾನಯನ #Hemavathi dam ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಹೊರಹರಿವು ಹೆಚ್ಚಾಗುವ ಸಂಭವವಿದ್ದು, ನದಿ ಪಾತ್ರದ ಜನರು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.
Also read: ಶಿವಮೊಗ್ಗ | ಜುಲೈ 28-29 | ಹರೋಹರ ಜಾತ್ರೆ | ಸಕಲ ಸಿದ್ದತೆ | ಬಿಗಿ ಭದ್ರತೆ |
ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಸುಮಾರು 45 ರಿಂದ 50ಸಾವಿರ ಕ್ಯೂಸೆಕ್ಸ್ ನೀರನ್ನು ಹೇಮಾವತಿ ನದಿಗೆ ಬಿಡಲಾಗುವುದು ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಹೇಮಾವತಿ ನದಿ ವ್ಯಾಪ್ತಿಯಲ್ಲಿ ತಗ್ಗುಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ, ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ ಮುಂಜಾಗ್ರತೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post