ಕಲ್ಪ ಮೀಡಿಯಾ ಹೌಸ್ | ಲಡಾಕ್ |
ಕಾರ್ಗಿಲ್ ಯುದ್ಧದ 25ನೇ ವಾರ್ಷಿಕೋತ್ಸವ #Kargil ಹಿನ್ನೆಲೆ ಪ್ರಧಾನಿ ಮೋದಿಯವರು #PM Modi ಇಂದು ಲಡಾಕ್ಗೆ ಭೇಟಿ ನೀಡಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ವೀರಮರಣ ಹೊಂದಿದ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.
ನಂತರ ಪ್ರಧಾನಿ ಮೋದಿಯವರು ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕ ಮ್ಯೂಸಿಯಂಗೆ ಭೇಟಿ ನೀಡಿ, ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಬಳಸಿರುವ ಮಿಲಿಟರಿ ಉಪಕರಣಗಳು, ಭಾರತೀಯ ಸೇನೆಯ ಯುದ್ಧ ಸಲಕರಣೆಗಳು, ಹುತಾತ್ಮ ಯೋಧರ ಛಾಯಾಚಿತ್ರಗಳನ್ನು ವೀಕ್ಷಿಸಿದರು.
Also read: ಕ್ರೈಸ್ಟ್‌ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಗಿಲ್ ವಿಜಯ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಅದಮ್ಯ ಧೈರ್ಯ ಮತ್ತು ಅಸಾಧಾರಣ ಶೌರ್ಯಕ್ಕೆ ಗೌರವ ಸಲ್ಲಿಸಲು ಕೃತಜ್ಞತೆ ಸಲ್ಲಿಸಲು ರಾಷ್ಟ್ರಕ್ಕೆ ಒಂದು ಸಂದರ್ಭವಾಗಿದೆ. 1999 ರಲ್ಲಿ ಕಾರ್ಗಿಲ್ ಶಿಖರಗಳಲ್ಲಿ ಭಾರತಮಾತೆಯನ್ನು ರಕ್ಷಿಸುವ ಸಂದರ್ಭದಲ್ಲಿ ಅತ್ಯುನ್ನತ ತ್ಯಾಗ ಮಾಡಿದ ಪ್ರತಿಯೊಬ್ಬ ಸೈನಿಕನಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post