ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ #JNNCE ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ, ಟೆಕ್‌ಫಾರ್ಜ್ ಸ್ಟುಡೆಂಟ್ಸ್ ಕ್ಲಬ್, ಐಇಇಇ ಸ್ಟೂಡೆಂಟ್ ವಿಭಾಗದ ಸಂಯುಕ್ತಾಶ್ರಯದಲ್ಲಿ ಜು.27,28 ರಂದು ಎರಡು ದಿನಗಳ ಕಾಲ ರಾಷ್ಟ್ರ ಮಟ್ಟದ ʼಫಾಸ್ ಹ್ಯಾಕ್ – 2024ʼ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮುಂಬೈನ ಫಾಸ್ ಯುನೈಟೆಡ್ ಫೌಡೆಂಷನ್ ನೇತೃತ್ವದ ಈ ಹ್ಯಾಕಥಾನ್ ಕಾರ್ಯಕ್ರಮವು ರಾಷ್ಟ್ರದ ಮುಂಬೈ, ದೆಹಲಿ, ಪುಣೆ, ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಹಾಗೂ ಆನ್ಲೈನ್ ಮೂಲಕ ಎರಡು ಹಗಲು ಒಂದು ರಾತ್ರಿ ಅವಧಿಯಲ್ಲಿ ಏಕಕಾಲದಲ್ಲಿ ನಡೆಯಲಿದ್ದು, ಅದರಲ್ಲಿ ಶಿವಮೊಗ್ಗದ ಜೆಎನ್‌ಎನ್ ಕಾಲೇಜು ಒಂದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ತಂಡ ತಮ್ಮ ನಾವೀನ್ಯ ಯೋಚನೆಗಳನ್ನು ಫಾಸ್ ಸಾಫ್ಟವೇರ್‌ನಲ್ಲಿ ಕೋಡಿಂಗ್ ಮೂಲಕ ರೂಪಿಸಬೇಕಾಗಿದ್ದು, ವಿಜೇತ ತಂಡಕ್ಕೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುತ್ತದೆ.
Also read: ಕಾರ್ಗಿಲ್ ಯುದ್ಧದಲ್ಲಿ ವೀರಮರಣ ಹೊಂದಿದ ಯೋಧರಿಗೆ ಪ್ರಧಾನಿ ಮೋದಿ ನಮನ

ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರದ ಯೋಜನಾ ವ್ಯವಸ್ಥಾಪಕ ಕೆ.ಎಲ್. ಅರುಣ್ ಕುಮಾರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post