ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶಿವಮೊಗ್ಗ ನಗರ ಮತ್ತುಗ್ರಾಮಾಂತರ ಭಾಗಕ್ಕೆ ರಾಜ್ಯ ರಸ್ತೆ ಸಾರಿಗೆ ನಗರ ಸಾರಿಗೆ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್. ತಂಗರಾಜ್ ಅವರು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನ ವಿಧಾನ ಸೌಧದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾವರೆಡ್ಡಿ #Ramalingareddy ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದ ನಂತರ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಆದರೆ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಭಾಗಕ್ಕೆ ಈಗ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸುಗಳ ಸಂಖ್ಯೆ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ನಗರ ಸಾರಿಗೆ ಬಸ್ಸುಗಳ ಸಂಖ್ಯೆಯನ್ನು ಜನ ಸಂಖ್ಯೆ ಗೆ ತಕ್ಕಂತೆ ಹೆಚ್ಚಿಸಬೇಕೆಂದು ಮನವಿ ಮಾಡಿದರು.

Also read: ಶೆಡ್ ಕುಸಿದು ಬಿದ್ದು, ಸಾವಿರಾರು ಕೋಳಿಗಳು ಸಾವು
ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ೫ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಸೇವೆಯನ್ನು ಒದಗಿಸಿದ್ದರೂ, ಬಸ್ಸುಗಳ ಸಂಖ್ಯೆ ಹೆಚ್ಚಿಲ್ಲದ ಕಾರಣ ಶಿವಮೊಗ್ಗ ನಗರದ ಜನತೆ ಈ ಯೋಜನೆಯಿಂದ ದೂರ ಉಳಿದಂತಾಗಿದೆ. ಆದ್ದರಿಂದಸರ್ಕಾರವು ಕೂಡಲೇ ಶಿವಮೊಗ್ಗದ ನಗರ ಸಾರಿಗೆ ಹಾಗೂ ತಾಲೂಕು ಹಾಗೂ ಗ್ರಾಮಂತರಕ್ಕೂ ಅತಿ ಹೆಚ್ಚು ಸರ್ಕಾರಿ ಬಸ್ ಗಳನ್ನು ವ್ಯವಸ್ಥೆ ಮಾಡಿ ಕಾರ್ಮಿಕ ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡಬೇಕೆಂದು ಅವರು ಸಚಿವರಲ್ಲಿ ವಿನಂತಿಸಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post