ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುಡ್ಢೆಕಲ್ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕರ ಮೇಲೆ ರೌಡಿಗಳ ಗುಂಪು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಿನ್ನೆ ನಗರದಲ್ಲಿ ನಡೆದಿದೆ.
ಹರ್ಷ. ಪುನೀತ್. ಕಿಶನ್ ಎಂಬ ಮೂವರು ಬಾಲಕರನ್ನು ಕಿಡಿಗೇಡಿಗಳ ಗುಂಪೊಂದು ಪುರಲೆಯ ತೋಟದ ಮನೆಗೆ ಕರೆದುಕೊಂಡು ಹೋಗಿ ತಲೆ. ಕೈ. ಮರ್ಮಾಂಗಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಹರ್ಷ ಎಂಬ ಬಾಲಕ ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆ ನಡೆಸಿದ ಗುಂಪು ಕುಖ್ಯಾತ ರೌಡಿಯ ಸಹಚರರೆಂದು ಹೇಳಲಾಗಿದ್ದು, ಈ ಸಂಬಂಧ ವಿನೋಬ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post