ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಬಿಎಂಪಿ #BBMP ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೆ.ಆರ್. ವೃತ್ತದಲ್ಲಿ ನಡೆದಿದೆ.
ಮೃತರನ್ನು ಪ್ರಶಾಂತ್ ಹಾಗೂ ಶಿಲ್ಪಾ ಎಂದು ಗುರುತಿಸಲಾಗಿದೆ.
ಮೃತ ಶಿಲ್ಪ ಆಂಧ್ರಪ್ರದೇಶದ #AndraPradesh ಹಿಂದೂಪುರ ನಿವಾಸಿಯಾದ್ದು, ನಾಗವಾರದ ಪಿಜಿಯಲ್ಲಿ ವಾಸವಾಗಿದ್ದರು. ಶಿಲ್ಪ ತಂದೆ ವೆಂಕಟರಾಮ ರೆಡ್ಡಿ ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ. ಅವರಿಗೆ ಒಟ್ಟು ಮೂವರು ಹೆಣ್ಣು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಆಗಿದೆ.
Also read: ದಲಿತರಿಗೆ ಮೀಸಲಿಟ್ಟ 312 ಕೋಟಿ ರೂ. ಹಿಂಪಡೆದು ಸಿದ್ದರಾಮಯ್ಯರಿಂದ ದ್ರೋಹ | ಈಶ್ವರಪ್ಪ ಗಂಭೀರ ಆರೋಪ
ಶಿಲ್ಪ ಕೊನೆಯ ಮಗಳಾಗಿದ್ದು, ಮದುವೆ ತಯಾರಿ ಮಾಡಿಕೊಂಡು, ಅದಕ್ಕಾಗಿ ಚಿನ್ನವನ್ನು ಮಾಡಿಸಿಟ್ಟಿದ್ದರು ಎಂಬ ವಿಚಾರ ತಿಳಿದು ಬಂದಿದೆ.
ಮದುವೆ ಪ್ರಸ್ತಾಪದ ದಿನವೇ ದುರಂತ
ಶಿಲ್ಪ ಮದುವೆ ವಿಚಾರವಾಗಿ ಭಾನುವಾರ ಬೆಳಗ್ಗೆ ಸಹ ವೆಂಕಟರಾಮ ರೆಡ್ಡಿಯವರು ಪ್ರಸ್ತಾಪ ಮಾಡಿದ್ದರು. ದುರಾದೃಷ್ಟವಶಾತ್ ಸಂಜೆ ಹೊತ್ತಿಗೆ ಯುವತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ.
ಲಾರಿ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಹಲಸೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















