ಕಲ್ಪ ಮೀಡಿಯಾ ಹೌಸ್ | ವಯನಾಡ್ |
ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ #Wayanad Landslide ಮೃತಪಟ್ಟವರ ಸಂಖ್ಯೆ 73ಕ್ಕೆ ಏರಿಕೆಯಾಗಿದ್ದು, ಹಲವು ಕುಟುಂಬಗಳು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ.
ಕಂಡು ಕೇಳರಿಯದ ರೀತಿಯಲ್ಲಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 400ಕ್ಕೂ ಅಧಿಕ ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.
Also read: ಹಾಸನ | ಬೆಚ್ಚಿ ಬೀಳಿಸಿದ ಭಾರೀ ಭೂಕುಸಿತ | ಮಣ್ಣಿನೊಂದಿಗೆ ಪ್ರಪಾತ ಸೇರಿದ ರಸ್ತೆ

ಮುಂಡಕ್ಕೆÊ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿವೆ.
ಎನ್’ಡಿಆರ್’ಎಫ್, ಅಗ್ನಿಶಾಮಕ ದಳ, ಪೊಲೀಸ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಸಾರ್ವಜನಿಕರು ಸಂಯುಕ್ತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಇನ್ನು, ಘಟನೆ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ವಾದ್ರಾ ಅವರುಗಳು ನಾಳೆ ವಯನಾಡ್’ಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post