ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ಭದ್ರ ಜಲಾಶಯದಿಂದ #Bhadra Dam ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ.
ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು 183.3 ಕ್ಯೂಸೆಕ್ ನೀರು ಸಂಗ್ರಹವಾಗಿದ್ದರಿಂದ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.
186ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಲಾಶಯದಿಂದ ಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ.
ಸುಮಾರು 2 ಸಾವಿರ ಕ್ಯೂಸೆಸ್ ನೀರು ನದಿ ಬಿಡಲಾಗಿದೆ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post