ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಔಟ್ಲುಕ್ ಮ್ಯಾಗಜೀನ್‌ನ #Out Look Magazine ಪ್ರಕಟಿಸಿರುವ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ್‍ಯಾಂಕಿಂಗ್ ಅಲ್ಲಿ ಕುವೆಂಪು ವಿವಿ 30ನೇ ಸ್ಥಾನ ಪಡೆದಿದೆ.
ದೇಶದ ಮುದ್ರಣ ಮಾಧ್ಯಮದಲ್ಲಿ ಪ್ರಸಿದ್ಧ ನಿಯತಕಾಲಿಕೆಯಾದ ಔಟ್ಲುಕ್ ಮ್ಯಾಗಜಿನ್ ವಿವಿಧ ಮಾನದಂಡಗಳನ್ನು ಪರಿಗಣಿಸಿ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ್‍ಯಾಂಕಿಂಗ್ ಅನ್ನು ಆ.3ರಂದು ಪ್ರಕಟಿಸಿದೆ. ಇದರಲ್ಲಿ ಒಟ್ಟು ದೇಶದ 75 ಸಂಸ್ಥೆಗಳಿದ್ದು ಕರ್ನಾಟಕದ ಗ್ರಾಮೀಣ ಭಾಗದ ವಿವಿಯಾದ ಕುವೆಂಪು ವಿವಿ ಅಗ್ರ 30ನೇ ಸ್ಥಾನ ಪಡೆದಿದೆ.
ನಿಯತಕಾಲಿಕೆಯು ಶೈಕ್ಷಣಿಕ ವಾತಾವರಣ, ಸಂಶೋಧನೆ ಮೂಲಭೂತ ಸೌಕರ್ಯಗಳು, ಆಡಳಿತ ಮತ್ತು ವಿಸ್ತರಣಾ ಕಾರ್ಯಕ್ರಮಗಳ ಐದು ಮಾನದಂಡಗಳ ಆಧಾರದಲ್ಲಿ ರ್‍ಯಾಂಕಿಂಗ್ ಪಟ್ಟಿ ಸಿದ್ಧಪಡಿಸಿದೆ. ಕುವೆಂಪು ವಿಶ್ವವಿದ್ಯಾಲಯವು ಒಟ್ಟು ಸಾವಿರ ಅಂಕಗಳಿಗೆ 877 ಪಾಯಿಂಟ್ ಗಳಿಸಿದೆ. ಇದೇ ಪಟ್ಟಿಯಲ್ಲಿ ಮೈಸೂರು ವಿಶ್ವವಿದ್ಯಾಲಯವು ಎಂಟನೇ ಸ್ಥಾನ ಗಳಿಸಿದ್ದರೆ, ಬೆಂಗಳೂರು ವಿಶ್ವವಿದ್ಯಾಲಯವು 24ನೇ ಸ್ಥಾನದಲ್ಲಿದೆ. ಹಾಗೂ ಈ ಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಮತ್ತು ತುಮಕೂರು ವಿವಿಗಳು ಕರ್ನಾಟಕದಿಂದ ಸ್ಥಾನ ಪಡೆದಿವೆ.
Also read: ಈಚೆಗೆ ಡೈವೋರ್ಸ್ ಸಂಖ್ಯೆ ಹೆಚ್ಚುತ್ತಿರುವುದೇಕೆ? ಲೈಂಗಿಕ ದೌರ್ಜನ್ಯ ದೂರು ಸಮಿತಿ ಸದಸ್ಯ ರೂಪಾರಾವ್ ಹೇಳಿದ್ದೇನು?
ನಿಯತಕಾಲಿಕೆಯು ಪರಿಗಣಿಸಿರುವ ಮಾನದಂಡಗಳು ಇಂತಿವೆ: ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆ, ಔದ್ಯಮಿಕ ವಲಯ ಮತ್ತು ಉದ್ಯೋಗ ಕಲ್ಪಿಸುವಿಕೆ, ಮೂಲಭೂತ ಶೈಕ್ಷಣಿಕ ಸೌಲಭ್ಯಗಳು, ಆಡಳಿತ ಮತ್ತು ವಿಸ್ತರಣಾ ಕಾರ್ಯಕ್ರಮಗಳು ಹಾಗೂ ವೈವಿಧ್ಯತೆಯನ್ನು ಒಳಗೊಳ್ಳುವ ಸಾಮರ್ಥ್ಯವನ್ನು ಪರಿಗಣನೆಗೆ ತೆಗೆದುಕೊಂಡು ಒಟ್ಟು ಸಾವಿರ ಅಂಕಗಳಿಗೆ ಮೌಲ್ಯಮಾಪನ ಮಾಡಲಾಗಿದೆ.
ಕುವೆಂಪು ವಿವಿಯ ಉತ್ತಮ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿ ಮಾತನಾಡಿದ ವಿವಿಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುವೆಂಪು ವಿವಿಯಲ್ಲಿ ಕಳೆದ ವರ್ಷಗಳಲ್ಲಿ ನಡೆದಿರುವ ಉತ್ತಮ ಸಂಶೋಧನೆ ಮತ್ತು ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳಿಂದ ವಿಶ್ವವಿದ್ಯಾಲಯ ಉತ್ತಮ ಪಾಯಿಂಟ್ಸ್ ಗಳಿಸಿದೆ. ಇದನ್ನು ಮತ್ತಷ್ಟು ಉತ್ತಮಪಡಿಸುವ ಸಲುವಾಗಿ ಅಗತ್ಯವಿರುವ ಪ್ರಯೋಗಾಲಯ ಸೌಲಭ್ಯಗಳು, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post