ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ಯಾರಿಸ್ ಒಲಂಪಿಕ್ಸ್‌ನ #Paris Olympics ಸ್ಪರ್ಧೆಯಿಂದ ಹೊರಬಿದ್ದಿರುವ ಕುಸ್ತಿಪಟು ವಿನೇಶ್ ಪೋಗಟ್, #Vinesh Pogat ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ ಎಂದು ಭಾವುಕ ಸಂದೇಶವನ್ನು ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮನದಾಳದ ಮಾತುಗಳನ್ನು ಬರೆದುಕೊಂಡಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ ಸಂಪೂರ್ಣ ಕುಗ್ಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ ಎಂದಿದ್ದಾರೆ.
Also read: `ಯಶ್’ ಬಿಗ್ ಅಪ್ಡೇಟ್ | ಟಾಕ್ಸಿಕ್ ಶೂಟಿಂಗ್ ಆರಂಭ | ಸರಳ ಮುಹೂರ್ತ | ಅದ್ದೂರಿ ಸೆಟ್
ಇದೇ ವೇಳೆ ಕುಸ್ತಿಗೆ ವಿದಾಯ ಹೇಳಿರುವ ಅವರು, ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಒಲಿಂಪಿಕ್ ಕ್ರೀಡಾಕೂಟದ ಫೈನಲ್ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಆದರೆ, ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















