ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಏಳನೇ ತರಗತಿಯ ಫಿಯೋನಾ ರಿಯಾ ಪಿಂಟೊ, ಐಶ್ವರ್ಯ ಪೂಜಾರಿ, ಸಾನ್ವಿ ಶೆಟ್ಟಿ ತಂಡವನ್ನು ಪ್ರತಿನಿಧಿಸಿದ್ದರು.
Also read: ಶಿವಮೊಗ್ಗ | ಆ.22-31ರವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ
ಜೊತೆಗೆ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಒಂತ್ತನೇ ತರಗತಿಯ ಅನುಷ್, ಹತ್ತನೇ ತರಗತಿಯ ಕೀರ್ತನ್ ಡಿಸೋಜ, ಸಾವನ್.ಎಸ್.ವರ್ಮ, ಮೊಹಮ್ಮದ್ ಆರಿಝ್, ಸುಕ್ಷಿತ್.ಎ.ಜೈನ್ ತಂಡವನ್ನು ಪ್ರತಿನಿಧಿಸಿದ್ದರು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್, ಕು.ಲಾವಣ್ಯ ತಂಡದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















