No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Wednesday, February 18, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಚ್‌ಎಂಟಿಗೆ ಜಮೀನನ್ನು ಪುಕ್ಕಟೆ ಕೊಟ್ಟಿಲ್ಲ, ವಾಪಸ್ ಕೊಡುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

ಜಮೀನು ವಾಪಸ್ ಪಡೆದು ಯಾವ ಬಿಲ್ಡರ್ ಗೆ ಧಾರೆ ಎರೆಯುತ್ತೀರಿ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 15, 2024
in ಬೆಂಗಳೂರು ನಗರ
0
5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್‌ಎಂಟಿ ಕಾರ್ಖಾನೆಯ #HMT Factory ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ #H D Kumaraswamy ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಎಚ್‌ಎಂಟಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಸಚಿವರು.

ಒಂದು ವೇಳೆ ರಾಜ್ಯ ಸರಕಾರ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೆಚ್‌ಎಂಟಿಗೆ ಜಮೀನನ್ನು ಪುಕ್ಕಟೆ ಕೊಟ್ಟಿಲ್ಲ

ಅರಣ್ಯ ಇಲಾಖೆ ಭೂಮಿಯನ್ನು ಅಕ್ರಮವಾಗಿ ವಿವಿಧ ಸರ್ಕಾರಿ ಸಂಸ್ಥೆ, ಇಲಾಖೆಗಳಿಗೆ ಮತ್ತು ಖಾಸಗಿಯವರಿಗೆ ಸಂಸ್ಥೆ ಮಾರಾಟ ಮಾಡಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿರುವ ಹೇಳಿಕೆಯನ್ನು ಸಚಿವರು ಸಾರಾಸಗಟಾಗಿ ತಳ್ಳಿಹಾಕಿದರು.
ಮೈಸೂರು ಮಹಾರಾಜರ ಕಾಲದಲ್ಲಿ ಜಗತ್ಪ್ರಸಿದ್ಧ ಎಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ಸ್ಥಾಪನೆಯಾದ ಹೆಚ್‌ಎಂಟಿ ಕಾರ್ಖಾನೆಗೆ ಯಾವುದೇ ಜಮೀನನ್ನು ಉಚಿತವಾಗಿ, ಪುಕ್ಕಟೆಯಾಗಿ ನೀಡಿಲ್ಲ. ಬೇಕಿದ್ದರೆ ರಾಜ್ಯ ಅರಣ್ಯ ಸಚಿವರು ದಾಖಲೆಗಳನ್ನು ತೆಗೆದು ನೋಡಲಿ ಎಂದು ಸಲಹೆ ಮಾಡಿದರು ಕುಮಾರಸ್ವಾಮಿ ಅವರು.

ಜಮೀನು ವಾಪಸ್ ಪಡೆದು ಯಾವ ಬಿಲ್ಡರ್ ಗೆ ಧಾರೆ ಎರೆಯುತ್ತೀರಿ?

ಕಾರ್ಖಾನೆಯ ವಶದಲ್ಲಿರುವ ಜಮೀನು ತೆಗೆದುಕೊಂಡು ಏನು ಮಾಡುತ್ತೀರಿ ಸಚಿವರೇ? ಯಾವ ಬಿಲ್ಡರ್ ಗೆ ದಾನ ಮಾಡುತ್ತೀರಿ? ಹಿಂದೆ ಬೆಂಗಳೂರು ನಗರವನ್ನು ಸಿಂಗಾಪುರ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ನಿಮ್ಮ ಪಕ್ಷದ ನಾಯಕರು ಮಾಡಿದ್ದೇನು ಎಂಬುದನ್ನು ಸ್ವಲ್ಪ ತಿಳಿದುಕೊಂಡು ಮಾತನಾಡಿ ಎಂದು ಟಾಂಗ್ ಕೊಟ್ಟರು ಕೇಂದ್ರ ಸಚಿವರು.

ಒಂದು ಕಡೆ ರಾಜ್ಯಕ್ಕೆ ಕೇಂದ್ರ ಸರಕಾರ ಸಹಕಾರ ನೀಡುತ್ತಿಲ್ಲ ಎಂದು ಆರೋಪ ಮಾಡುತ್ತೀರಿ. ಇನ್ನೊಂದು ಕಡೆ ರಾಜ್ಯಕ್ಕೆ ಒಳ್ಳೆಯದು ಮಾಡಲು ಬರುವ ಕೇಂದ್ರ ಸಚಿವರಿಗೆ ಅಡ್ಡಿ ಮಾಡುತ್ತೀರಿ. ಜನತೆಯ ಆಶೀರ್ವಾದ ಹಾಗೂ ಭಗವಂತನ ಕೃಪೆಯಿಂದ ನಾನು ಕೇಂದ್ರದ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವನಾಗಿದ್ದೇನೆ. ಸಿಕ್ಕಿರುವ ಕಾಲಾವಕಾಶದಲ್ಲಿ ರಾಜ್ಯಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ಎನ್ನುವುದು ನನ್ನ ಕಳಕಳಿ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಕೇಂದ್ರ ಸರಕಾರಕ್ಕೆ ಸಹಕಾರ ಕೊಡಿ

ನನಗೆ ಅಸಹಕಾರ ಕೊಟ್ಟರೆ ನಿಮಗೆ ಸಿಗುವ ಲಾಭ ಏನು? ಇಲ್ಲಿ ಕುಮಾರಸ್ವಾಮಿ ಮುಖ್ಯವಲ್ಲ. ರಾಜ್ಯಕ್ಕೆ ಒಳ್ಳೆಯದು ಆಗಬೇಕು. ಅದಕ್ಕಾಗಿ ನನಗೆ, ಕೇಂದ್ರ ಸರಕಾರಕ್ಕೆ ಸಹಕಾರ ಕೊಡಿ. ಇನ್ನಾದರೂ ಲೂಟಿ ಹೊಡೆಯುವುದು ನಿಲ್ಲಿಸಿ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಿ. ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಯನ್ನು ಪತ್ರಿಕೆಯಲ್ಲಿ ಓದಿ ನನ್ನ ಕಣ್ಣಲ್ಲಿ ನೀರು ಬಂತು. ಹೆಚ್‌ಎಂಟಿ ಯಂತಹ ಕಾರ್ಖಾನೆಗಳನ್ನು ಕಳೆದುಕೊಂಡು ಏನು ಸಾಧನೆ ಮಾಡುತ್ತೀರಿ? ಎಂದು ಕೇಂದ್ರ ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಅರಣ್ಯ ಭೂಮಿಯನ್ನು ವಾಪಸ್ಸು ಪಡೆಯುವ ರಾಜ್ಯ ಅರಣ್ಯ ಸಚಿವರ ಹೇಳಿಕೆಯ ಬಗ್ಗೆ ಅತೀವ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವರು; ಯಾವ ಆಧಾರದ ಮೇಲೆ ಮರಳಿ ಅರಣ್ಯ ಇಲಾಖೆ ವಶಕ್ಕೆ ಭೂಮಿಯನ್ನು ಪಡೆಯುತ್ತೀರಿ? ಇದರ ಒಳ ಉದ್ದೇಶ ಏನು? ನಿಮಗೆ ಈ ಭೂಮಿಗಳ ದಾಖಲೆಗಳು, ಈ ಕಾರ್ಖಾನೆಯ ಸ್ಥಾಪನೆಯ ಇತಿಹಾಸ ಗೊತ್ತಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಸಚಿವ ಜಾರ್ಜ್

ಯಾವ ಕಾರಣಕ್ಕೂ ಹೆಚ್‍ಎಂಟಿಗೆ ಸೇರಿದ ಜಮೀನನ್ನು ವಾಪಸ್ಸು ಕೊಡುವ ಪ್ರಶ್ನೆಯೇ ಇಲ್ಲ. ಅದು ಖರೀದಿ ಮಾಡಿರುವ ಜಮೀನಾಗಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಅಂತಹ ನಡೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಹೆಚ್‍ಎಂಟಿಗೆ 599 ಎಕರೆ ಜಮೀನನ್ನು ಉಚಿತವಾಗಿ ಕೊಟ್ಟಿಲ್ಲ. ಜಮೀನು ಹಸ್ತಾಂತರಕ್ಕೆ ಸಂಬಂಧಿಸಿದ ಕಡತವನ್ನು ಅರಣ್ಯ ಸಚಿವರು ಪರಿಶೀಲಿಸುವುದು ಒಳ್ಳೆಯದು ಎಂದ ಕೇಂದ್ರ ಸಚಿವರು; ರಾಜ್ಯ ಸರಕಾರ ಇದೇ ರೀತಿ ಕಂಪನಿಗೆ ಕಿರುಕುಳ ನೀಡಿದರೆ, ನಾವು ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ಕೊಟ್ಟರು.
Kalahamsa Infotech private limited1963ರಲ್ಲಿ 185 ಎಕರೆಗೆ 4.40 ಲಕ್ಷ ರೂ. ಹಾಗೂ 77 ಎಕರೆಗೆ 1.80 ಲಕ್ಷ ರೂ. 1965ರಲ್ಲಿ ಪಾವತಿಸಲಾಗಿದೆ. ಮೂರನೇ ಬಾರಿಗೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರಕಾರ ಅಧಿಕಾರಕ್ಕೆ ಬಂದ ಮೇಲೆ ನಾನು ಭಾರೀ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡೆ. ಬೆಂಗಳೂರು, ಹೈದರಾಬಾದ್, ಹರಿಯಾಣದ ಪಿಂಜಾರೋದಲ್ಲಿರುವ ಘಟಕಗಳಿಗೆ ಭೇಟಿ ನೀಡಿದ್ದೆ. ಹೆಚ್‍ಎಂಟಿಗೆ ಕಾಯಕಲ್ಪ ನೀಡುವುದಾಗಿ ಪ್ರಕಟಿಸಿದ ಬೆನ್ನಲ್ಲೇ ಅದರ ಷೇರು ಮೌಲ್ಯ ₹45 ಇದ್ದದ್ದು ₹95ಕ್ಕೆ ಏರಿಕೆಯಾಯಿತು. ನಾನು ಒಂದು ಸಂಸ್ಥೆಗೆ ಕಾಯಕಲ್ಪ ನೀಡಲು ಪ್ರಯತ್ನಿಸುತ್ತಿದ್ದರೆ,ರಾಜ್ಯ ಸರಕಾರದಿಂದ ಅಸಹಕಾರ ಹಾಗೂ ಗೊಂದಲ ಮೂಡಿಸುವ ಕೆಲಸವಾಗುತ್ತಿದೆ ಎಂಡಿ ಕಿಡಿಕಾರಿದರು.

2020ರಲ್ಲಿ ಡಿ ನೋಟಿಫಿಕೇಷನ್‍ಗಾಗಿ ಸರಕಾರದಿಂದ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ. ಅದರ ಬಗ್ಗೆ ಈಗ ಅನುಮಾನ ಶುರುವಾಗಿದೆ ಎಂದ ಸಚಿವರು; ಹೆಚ್‍ಎಂಟಿ ಕಾರ್ಖಾನೆಯನ್ನು ಉಳಿಸುವ ಉದ್ದೇಶದಿಂದ ಪರಿಣಿತರ ಸಮಿತಿ ರಚನೆಗೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರಕಾರ 2016ರಲ್ಲೇ ನಷ್ಟದ ಉದ್ಯಮವೆಂದು ಮುಚ್ಚಲು ತೀರ್ಮಾನಿಸಿತ್ತು. ಆದರೆ ಪ್ರಧಾನಿಗಳು, ಹಣಕಾಸು ಸಚಿವರು ಹಾಗೂ ಬಂಡವಾಳ ವಾಪಸಾತಿ ಇಲಾಖೆಯ ಮನವೊಲಿಸಿ ಈ ಹೆಮ್ಮೆಯ ಕಾರ್ಖಾನೆಗೆ ಕಾಯಕಲ್ಪ ನೀಡುವ ಗುರಿ ನನ್ನದು. ಈ ಪ್ರಯತ್ನಕ್ಕೆ ರಾಜ್ಯ ಸರಕಾರ ಪ್ರಾಂಜಲ ಮನಸ್ಸಿನಿಂದ ಸಹಕಾರ ನೋಡಬೇಕು ಎಂದು ಕುಮಾರಸ್ವಾಮಿ ಅವರು ಕೋರಿದರು.

1999-2004 ರವರೆಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದವರು ಯಾರು?
ಹಿಂದೆ ಹೆಚ್‍ಎಂಟಿಗೆ ಸೇರಿದ 200 ಎಕರೆ ಜಮೀನನ್ನು ಮಾರಾಟ ಮಾಡಲು ಅನುಮತಿ ಕೊಟ್ಟರು ಯಾರು? 1999ರಿಂದ 2004 ರವರೆಗೆ ರಾಜ್ಯದಲ್ಲಿ ಯಾರು ಅಧಿಕಾರದಲ್ಲಿದ್ದರು? 2006ರಲ್ಲಿ ನಾನು ಮುಖ್ಯಮಂತ್ರಿಯಾದಾಗ ಹೆಚ್‍ಎಂಟಿಯ ಒಂದು ಅಂಗುಲ ಜಮೀನು ಮಾರಾಟ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಆದೇಶ ಮಾಡಿದ್ದೆ. ಅದಕ್ಕೆ ಭೂಮಿ ಉಳಿದುಕೊಂಡಿದೆ. ಆದರೆ, ಆಡಳಿತ ನಡೆಸಿದ ಸರಕಾರಗಳಲ್ಲಿ ಬಿಲ್ಡರ್ ಕೆಲಸ ಮಾಡುತ್ತಿದ್ದ ಕೆಲವರಿಗೆ ಈ ಕಾರ್ಖಾನೆಯ ಜಮೀನು ಮೇಲೆ ವಕ್ರದೃಷ್ಟಿ ಬಿದ್ದಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಪ್ರೆಸ್ಟೀಜ್ ಕಂಪನಿಯವರು 27 ಎಕರೆ ಭೂಮಿ ಖರೀದಿ ಮಾಡಿದ್ದು ಯಾವಾಗ? ಈಗಾಗಲೇ ಅಪಾರ್ಟ್ಮೆಂಟ್ ಗಳನ್ನು ಕಟ್ತಾ ಇದಾರಲ್ಲಾ? ಅದೇನೋ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟಿದ್ದಾರಲ್ಲಾ? ಪ್ರೆಸ್ಟೀಜ್ ಗೆ ಭೂಮಿ ಖರೀದಿ ಎನ್ ಓಸಿ ಕೊಡುತ್ತಾರೆ. ಆದರೆ, ನಮ್ಮ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಖರೀದಿ ಮಾಡಲು ಬಂದರೆ ಎನ್ ಓಸಿ ಕೊಡುವುದಿಲ್ಲ. ರಾಜ್ಯ ಸರಕಾರಕ್ಕೆ ಪ್ರೆಸ್ಟೀಜ್ ಮುಖ್ಯವಾ? ಅಥವಾ ಇಸ್ರೋ ಮುಖ್ಯವಾ? ಹೇಳಬೇಕಲ್ಲವೇ? ಎಂದು ಟಾಂಗ್ ಕೊಟ್ಟರು ಕೇಂದ್ರ ಸಚಿವರು.

ಕಾಡುಗೋಡಿ ಪ್ಲಾಂಟೇಷನ್ 711 ಎಕರೆ ಇದೆ. ಅದನ್ನು ಕಾನ್ ಕಾರ್ಡ್ ಪ್ರೈ ಲಿ. ಖರೀದಿ ಮಾಡಿದೆ. ಈಗ ಆ ಭೂಮಿಯಲ್ಲಿ ರಾಜ್ಯ ಸರಕಾರ ನಿವೇಶನಗಳನ್ನು ಮಾಡಿ ಹಂಚಲು ಹೊರಟಿದೆ. ಆಗ ಅದು ಅರಣ್ಯ ಭೂಮಿ, ಅದನ್ನು ವಶಪಡಿಸಿಕೊಳ್ಳಬೇಕು ಅನಿಸಲಿಲ್ಲವಾ‌? ಖಂಡ್ರೆ ಅವರೇ… ಕುಮಾರಸ್ವಾಮಿ ಮೇಲಿನ ದ್ವೇಷಕ್ಕೆ ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ. ನೀವು ಲೂಟಿ ಮಾಡಿದ್ದು ಸಾಕು. ಕುಮಾರಸ್ವಾಮಿ ಮಾಡ್ತಿರುವ ಕೆಲಸಕ್ಕೆ ಸಹಕಾರ ಕೊಡಿ ಎಂದು ಅವರು ಒತ್ತಾಯ ಮಾಡಿದರು.

ಹೆಚ್‍ಎಂಟಿ ಕಾರ್ಖಾನೆಯಲ್ಲಿ 15ರಿಂದ 20 ಸಾವಿರ ಜನ ಕೆಲಸ ಮಾಡುತ್ತಿದ್ದರು. ಗಡಿಯಾರ ಹಾಗೂ ಟ್ರ್ಯಾಕ್ಟರ್ ಘಟಕವೊಂದಿತ್ತು. 1970ರಲ್ಲಿ ₹270 ಕೋಟಿ ಲಾಭ ಗಳಿಸಿತ್ತು. ಆ ಹಣದಿಂದ ಹೈದರಾಬಾದ್, ಉತ್ತರಕಾಂಡ, ಕೇರಳ, ಅಜ್ಮೀರ್ ಮೊದಲಾದೆಡೆ ಶಾಖೆಗಳು ಪ್ರಾರಂಭವಾದವು. ಇವೆಲ್ಲಾ ದೇಶಕ್ಕೆ ದೊಡ್ಡ ಕೊಡುಗೆ ಕೊಟ್ಟಿವೆ ಎಂದರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreH D KumaraswamyHMT FactoryKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಎಚ್.ಡಿ. ಕುಮಾರಸ್ವಾಮಿಬೆಂಗಳೂರುಹೆಚ್‌ಎಂಟಿ ಕಾರ್ಖಾನೆ
Share197Tweet123Send
Previous Post

ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಸಚಿವ ಜಾರ್ಜ್

Next Post

ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ | 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ | 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ | 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

February 18, 2026
ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

February 18, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.19-21ರವರೆಗೂ ಶಿವಮೊಗ್ಗ ಈ ಎಲ್ಲಾ ಕಡೆ ಕರೆಂಟ್ ಇರಲ್ಲ

February 18, 2026
ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL