ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಚೆಸ್ ಪಂದ್ಯದಾಟದಲ್ಲಿ ಕ್ರೈಸ್ಟ್ ಕಿಂಗ್ #Christ King ಶಾಲೆಯ 8ನೇ ತರಗತಿ ವಿದ್ಯಾರ್ಥಿ ವರುಣ್ ಕಾಮತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ಜಂಟಿ ಆಶ್ರಯದಲ್ಲಿ ಬ್ರಹ್ಮಾವರದ ಕೋಡಿ ಕನ್ಯಾನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪಂದ್ಯದಲ್ಲಿ ವರುಣ್ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಒಂದು ವಾರ ಆರಾಧನಾ ಸಪ್ತರಾತ್ರೋತ್ಸವ
ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ವರುಣ್ ಪಾಲ್ಗೊಳ್ಳಲಿದ್ದಾನೆ. ಕಳೆದ ಸಾಲಿನಲ್ಲಿಯೂ ಪ್ರಾಥಮಿಕ ವಿಭಾಗದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಈ ವರ್ಷವೂ ಆಯ್ಕೆಯಾಗುವುದರೊಂದಿಗೆ ವರುಣ್ ಕಾಮತ್ ಸತತ ಎರಡನೇ ಬಾರಿಗೆ ಶಿಕ್ಷಣ ಇಲಾಖೆಯ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post