ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಓಪನ್ 5ನೇ ಅಂತಾರಾಷ್ಟ್ರೀಯ ಪಂದ್ಯಾವಳಿಯನ್ನು ಆ. 24, 25ರಂದು ನಗರದ ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ನಗರ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ವಿನೋದ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದು ಶಿವಮೊಗ್ಗದಲ್ಲಿ ನಡೆಯುತ್ತಿರುವ 5ನೇ ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಾಗಿದೆ. ಶ್ರೀಲಂಕಾ, ನೇಪಾಳ ಸೇರಿದಂತೆ ದೇಶದ 13 ರಾಜ್ಯಗಳಿಂದ ಸುಮಾರು ಎರಡೂವರೆ ಸಾವಿರ ಕ್ರೀಡಾಪಟುಗಳು ಆಗಮಿಸುತ್ತಿದ್ದಾರೆ. ಈ ಪಂದ್ಯಾವಳಿಗೆ ಅಮೆರಿಕದಿಂದ ಗ್ರ್ಯಾಂಡ್ ಮಾಸ್ಟರ್ ಚೆರ್ರಿ ಎಫ್. ಮೌಲೆ, ಚಿತ್ರ ನಟ ಸುಮನ್ ತಲ್ವಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುತ್ತಾರ ಎಂದರು.
Also read: ಆ.20-22: ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 353ನೇ ಆರಾಧನಾ ಮಹೋತ್ಸವ
ಈ ಪಂದ್ಯಾವಳಿಯಲ್ಲಿ ಕಟಾ, ಕುಮಿಟೆ ಎಂಬ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತದೆ. ಏಷ್ಯನ್ ತೀರ್ಪುಗಾರರು ಸೇರಿದಂತೆ ರಾಷ್ಟ್ರೀಯ ತೀರ್ಪುಗಾರರು ಆಗಮಿಸಲಿದ್ದಾರೆ. ವಿಜೇತರಾದವರಿಗೆ ಪದಕ ಮತ್ತು ಪ್ರಶಸ್ತಿ ನೀಡಲಾಗುವುದು. ಕ್ರೀಡಾಪಟುಗಳಿಗೆ ಪ್ರಥಮ ಚಿಕಿತ್ಸೆ ಸೇರಿದಂತೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.
ಆ. 24ರಂದು ಬೆಳಗ್ಗೆ 11 ಗಂಟೆಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಪಂದ್ಯಾವಳಿ ಉದ್ಘಾಟಿಸುವರು. ಸಮಾರೋಪವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೆರವೇರಿಸುವರು. ಕಾರ್ಯಕ್ರಮದಲ್ಲಿ ಹಲವು ಮುಖಂಡರು ಉಪಸ್ಥಿತರಿರುತ್ತಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶರವಣ, ರಾಘವೇಂದ್ರ, ಪಂಚಪ್ಪ, ಮೀನಾಕ್ಷಿ, ನರಸಿಂಹಸ್ವಾಮಿ, ಅನೂಪ್, ಇಂಚನಾ, ಸ್ನೇಹ, ರಾಮಚಂದ್ರ, ಇಬ್ರಾಹಿಂ, ಜಸ್ಕೀನ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















