ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ #Mpox ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟಿಲ್ #Dr. Sharanaprakash Patil ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Also read: Precautionary steps discussed to prevent the spread of Mpox: Minister Dr. Sharan Prakash Patil
ಈ ಸೋಂಕು #Infection ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್ ಮಾಹಿತಿ ನೀಡಿದರು.

ಇದು ವೈರಲ್ ಇನ್ಫೆಕ್ಷನ್ ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post