ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅತ್ಯುತ್ತಮ ಸಂಸದೀಯ ಪಟು ಎಂದು ಖ್ಯಾತಿ ಪಡೆದಿದ್ದ ಮಾಜಿ ಸಚಿವ, ಮಾಜಿ ಶಾಸಕ ಕೆ.ಎಚ್. ಶ್ರೀನಿವಾಸ್(85) #K H Shrinivas ವಿಧಿವಶರಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದ ಅವರು ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದರು.
Also read: ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು
ಸಾಗರದಲ್ಲಿ ಕಾಗೋಡು ತಿಮ್ಮಪ್ಪ ವಿರುದ್ಧ ಹಿಂದೆ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರೆ, ಶಿವಮೊಗ್ಗದಲ್ಲಿ ಜನಸಂಘದ ಆನಂದರಾವ್ ಅವರ ವಿರುದ್ಧ ಗೆಲುವು ಸಾಧಿಸಿದ್ದರು. ರಾಜ್ಯ ಸರ್ಕಾರದಲ್ಲಿ ಇಂಧನ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಅಲ್ಲದೇ, ಸಾಗರದ ಪ್ರತಿಷ್ಠಿತ ಎಲ್’ಬಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾಗಿಯೂ ಸಹ ಇವರು ಪ್ರಸಿದ್ದರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post