ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ #Rape ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುನೀತ್ ಬಂಧಿತ ಉಪನ್ಯಾಸಕ. ಸಾಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ಉಪನ್ಯಾಸಕನಾಗಿರುವ ಪುನೀತ್ ನನ್ನು ಶಿವಮೊಗ್ಗದ ಖಾಸಗಿ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ.
Also read: ಗಣೇಶೋತ್ಸವದಿಂದ ಈ ದಿನದವರೆಗೂ ಜಿಲ್ಲೆಯಾದ್ಯಂತ ಡಿಜೆ ನಿಷೇಧ | ಡಿಸಿ ಆದೇಶದಲ್ಲಿ ಏನಿದೆ?

ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿ ಉಪನ್ಯಾಸಕ ಪುನೀತ್ ನನ್ನು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post