No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ರಾಜ್ಯ ಸರ್ಕಾರದಿಂದ ರೈತರಿಗೆ ಬೆಲೆ ಕಡಿತದ ಬರೆ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

kalpa News by kalpa News
September 3, 2024
in ಹುಬ್ಬಳ್ಳಿ-ಧಾರವಾಡ
0
ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ; ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ! ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ.ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ ಎಂದು ಜೋಶಿ ಖಂಡಿಸಿದ್ದಾರೆ.

ಹೈನುಗಾರರು ಹೈರಾಣ: ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರದ ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿ ಹೈನುಗಾರರನ್ನು ಹೈರಾಣಾಗಿಸಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ, ಇತ್ತ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ.
ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್ ಗೆ 28, 29 ರೂ. ನೀಡುತ್ತಿವೆ. ಕೆಲವೆಡೆ ಇದಕ್ಕೂ ಖೋತಾ ಆಗಿದೆ. ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕಿಸಿದ್ದಾರೆ.

ಒಕ್ಕೂಟಗಳಿಂದ ನಷ್ಟದ ಸಬೂಬು: ಹಾಲು ಉತ್ಪಾದಕರು ದರ ಕಡಿತದ ಬಗ್ಗೆ ಪ್ರಶ್ನಿಸಿದರೆ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟವು ನಷ್ಟದ ಸಬೂಬು ನೀಡಿದೆ. ನಷ್ಟದ ನೆಪದಲ್ಲಿ ಸರ್ಕಾರ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಬರೆ ಎಳೆದಿದೆ ಎಂದು ಸಚಿವರು ಖಂಡಿಸಿದ್ದಾರೆ.

Also read: ನಾಲಿಗೆ ರುಚಿಗಿಂತ ದೇಹಾರೋಗ್ಯ ಕಾಪಾಡುವ ಆಹಾರಕ್ಕೆ ಆದ್ಯತೆ ನೀಡಿ: ಡಾ. ವಾದಿರಾಜ್

ನಷ್ಟದಲ್ಲಿ ಇರುವುದು ಒಕ್ಕೂಟಗಳಲ್ಲ; ರೈತರು ಹೈನುಗಾರಿಕೆಯಲ್ಲಿ ನಿಜವಾಗಿ ನಷ್ಟದಲ್ಲಿ ಇರುವುದು ಹಾಲಿನ ಒಕ್ಕೂಟಗಳಲ್ಲ, ರೈತರು. ಕಾರಣ ಹಾಲು ಉತ್ಪಾದನೆ ವೆಚ್ಚ ದುಪ್ಪಟ್ಟಾಗಿದೆ. ಹಸು, ಎಮ್ಮೆಗಳ ಬೆಲೆ ಹೆಚ್ಚಿದೆ. ಪಶು ಆಹಾರ ಬೆಲೆಯೂ ದುಪ್ಪಟ್ಟಾಗಿ ಸಾಕಾಣಿಕೆ ದುಬಾರಿಯಾಗಿದೆ. ಇತ್ತ ನ್ಯಾಯಯುತ ದರವೂ ದಕ್ಕುತ್ತಿಲ್ಲ ಎಂದು ಸಚಿವ ಜೋಶಿ ಹೇಳಿದ್ದಾರೆ.

ಮಾರುವ ದರ ದುಪ್ಪಟ್ಟು; ಕೊಳ್ಳೋ ಬೆಲೆ ತೀರಾ ಕಡಿಮೆ: 2013-14ರಲ್ಲಿ ನಂದಿನಿ ಹಾಲಿನ ಬೆಲೆ ಲೀಟರ್ ಗೆ 29 ರೂ. ಇತ್ತು, 2024ರಲ್ಲಿ ಅರ್ಧ ಲೀಟರ್ ಹಾಲಿಗೇ ಇಷ್ಟು ಬೆಲೆಯಿದೆ. ಅಂದರೆ ಹತ್ತು ವರ್ಷದಲ್ಲಿ ಗ್ರಾಹಕರಿಗೆ ಶೇ.100ರಷ್ಟು ಬೆಲೆಯ ಹೊರೆ ಹೇರಲಾಗಿದೆ. ಆದರೆ ರೈತರಿಗೆ ಶೇ.10 ರಷ್ಟೂ ಬೆಲೆ ಹೆಚ್ಚಿಲ್ಲ. ಈಗಲೂ 2014ರಲ್ಲಿ ಇದ್ದಷ್ಟೇ ಇದೆ. ಅತ್ಯಂತ ಕನಿಷ್ಠ ದರ 26 ರಿಂದ 29 ರೂ.ಲೀಟರ್ ಗೆ ದಕ್ಕುತ್ತಿದೆ ಎಂದು ಸಚಿವರು ವಿಷಾದಿಸಿದ್ದಾರೆ.

ರೈತರಿಗೂ ಬರೆ, ಗ್ರಾಹಕರಿಗೂ ಬರೆ: ಸರ್ಕಾರ 2 ತಿಂಗಳ ಹಿಂದೆ 2 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಬರೆ ಎಳೆದಿತ್ತು. ಈಗ ಖರೀದಿ ಬೆಲೆ ಕಡಿತಗೊಳಿಸಿ ಉತ್ಪಾದಕರಿಗೂ ಬರೆ ಎಳೆದಿದೆ ಎಂದಿದ್ದಾರೆ.

ಲೀಟರ್ ಹಾಲಿನ ಮೇಲೆ ಹತ್ತಾರು ರೂ. ಹೆಚ್ಚುವರಿ: ಇನ್ನು ಹಾಲಿನ ಗುಣಮಟ್ಟದ ನೆಪದಲ್ಲಿ ಐದಾರು ರೂಪಾಯಿ ಪ್ರೋತ್ಸಾಹ ಧನಕ್ಕೂ ಕೊಕ್ ಹಾಕುತ್ತಿದೆ. ರಾಜ್ಯ ಸರ್ಕಾರ, ಈ ರೀತಿ ಪ್ರೋತ್ಸಾಹ ಧನ ಉಳಿಕೆ, ಖರೀದಿ ದರ ಕಡಿತ, ಮಾರಾಟ ದರ ಹೆಚ್ಚಳ ರೂಪದಲ್ಲಿ ಲೀಟರ್ ಹಾಲಿನ ಮೇಲೆ ಹತ್ತಾರು ರೂಪಾಯಿ ಹೆಚ್ಚುವರಿ ಆದಾಯದ ಮಾರ್ಗ ಕಂಡುಕೊಂಡಿದೆ. ಹೀಗಿರುವಾಗ ನಷ್ಟ ಹೇಗೆಂದು? ಸಚಿವ ಜೋಶಿ ಪ್ರಶ್ನಿಸಿದ್ದಾರೆ.

http://kalpa.news/wp-content/uploads/2024/04/VID-20240426-WA0008.mp4

ನಷ್ಟ ಸರಿದೂಗಿಸಲು ಸೋರಿಕೆ ತಡೆಗೆಟ್ಟಲಿ: ಹಾಲು ಒಕ್ಕೂಟಗಳು ನಷ್ಟದಲ್ಲಿ ಇದ್ದರೆ ಮೊದಲು ಹಾಲು ಒಕ್ಕೂಟ, ಶೀತಲೀಕರಣ ಘಟಕ ಹಾಗೂ ಹಾಲು ಸಂಗ್ರಹ ಕೇಂದ್ರಗಳಲ್ಲಿ ಆಗುತ್ತಿರುವ ಸೋರಿಕೆಯನ್ನೇ ತಡೆ ಗಟ್ಟಿದರೆ ಸಾಕು ಎಂದು ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ ಸಚಿವ ಜೋಶಿ.

ಹೈನುಗಾರಿಕೆಯಿಂದ ವಿಮುಖ: ಒಂದೆಡೆ ಮೇವು, ಪಶು ಆಹಾರ ಬೆಲೆ ಹೆಚ್ಚಳ, ಇನ್ನೊಂದೆಡೆ ಹಾಲು ಒಕ್ಕೂಟಗಳು ಮತ್ತು ಸರ್ಕಾರದಿಂದ ವಂಚನೆ. ಹೀಗಾಗಿ ರಾಜ್ಯದ ಅನೇಕ ಗ್ರಾಮಗಳಲ್ಲಿ ಇಂದು ಸಣ್ಣಪುಟ್ಟ ರೈತರು ಹೈನುಗಾರಿಕೆಯಿಂದಲೇ ವಿಮುಖರಾಗುವಂತಾಗಿ, ಹೈನುಗಾರಿಕೆ ಪ್ರಭಾವಿಗಳ ಸ್ವತ್ತಾಗಲಿದೆ ಎಂದು ಜೋಶಿ ಎಚ್ಚರಿಸಿದ್ದಾರೆ.

ರೈತ ಪರ ಎನ್ನುವ ಕಾಂಗ್ರೆಸ್ ಗೆ ನಾಚಿಕೆ ಆಗಬೇಕು: ನಮ್ಮದು ರೈತಪರ ಸರ್ಕಾರ, ಜನಪರ ಸರ್ಕಾರ ಎನ್ನುವ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವುಗಳನ್ನೇ ತೆಗೆದುಕೊಳ್ಳುತ್ತಿದ್ದು, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಕಿಡಿ ಕಾರಿದ್ದಾರೆ.

ಬೆಲೆ ಕಡಿತ ಕೈಬಿಟ್ಟು ನ್ಯಾಯಯುತ ದರ ನೀಡಲಿ: ರಾಜ್ಯ ಸರ್ಕಾರ ಕೂಡಲೇ ಬೆಲೆ ಕಡಿತದ ಆದೇಶ ಹಿಂಪಡೆಯಬೇಕು. ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: HubliKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಲಿಗೆ ರುಚಿಗಿಂತ ದೇಹಾರೋಗ್ಯ ಕಾಪಾಡುವ ಆಹಾರಕ್ಕೆ ಆದ್ಯತೆ ನೀಡಿ: ಡಾ. ವಾದಿರಾಜ್

Next Post

Government Cracks Down on Nursing Colleges Over Exorbitant Fees and Substandard Facilities

kalpa News

kalpa News

Next Post
Government Cracks Down on Nursing Colleges Over Exorbitant Fees and Substandard Facilities

Government Cracks Down on Nursing Colleges Over Exorbitant Fees and Substandard Facilities

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL