ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮನೆಯಲ್ಲಿ ಆಟವಾಡುವ ವೇಳೆ, ಒಂದೂವರೆ ವರ್ಷದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ ಶಿಕಾರಿಪುರದಲ್ಲಿ ನಡೆದಿದೆ.
ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್ ಮೃತಪಟ್ಟ ಮಗು.
Also read: ರೇಡಿಯೋ ಶಿವಮೊಗ್ಗ ಎಫ್‌ಎಂನಲ್ಲಿ ನಟ ಪ್ರಮೋದ್ ಶೆಟ್ಟಿ ಸಂವಾದ | ಸೆ.6ರಂದು ಪ್ರಸಾರ
ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು ಅದು ಗಂಟಲಲ್ಲಿ ಸಿಲುಕಿ ಬಿದ್ದಿದೆ. ಮುಗುವಿನ ಉಸಿರಾಟದಲ್ಲಿ ಏರುಪೇರಾಗಿದೆ. ತಕ್ಷಣವೇ ಕುಟುಂಬದವರು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post