ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #RenukaswamyMurderCase ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿನ ಅಂಶಗಳನ್ನು ಪ್ರಕಟಣೆ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದೆ.
ಈ ಕುರಿತಂತೆ ಚಾರ್ಜ್ ಶೀಟ್’ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ #ActorDarshan ಹೈಕೋರ್ಟ್’ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿ ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.
ಮುಂದಿನ ವಿಚಾರಣೆಯವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಪ್ರಕರಣವು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿದ್ದ ಮೊಕದ್ದಮೆಗೆ ಆಗಸ್ಟ್ 27 ರಂದು ಕೆಳ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ, ಮಾಧ್ಯಮಗಳು ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುವುದನ್ನು ಮುಂದುವರಿಸಿವೆ ಎಂದು ಹೈಕೋರ್ಟ್ ಗಮನಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ ಪೊಲೀಸರು 3,991 ಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















