ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಹಿಂಸಾಚಾರ #Nagamangala Riots ಘಟನೆಗೆ ಸಂಬಂಧಿಸಿದಂತೆ ಬಂಧಿತ ಸಂಬಂಧಿ ಮಹಿಳೆಯರು ಪೊಲೀಸ್ ಠಾಣೆ ಮುಂದೆ ಹೈಡ್ರಾಮ ನಡೆಸಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಿನ್ನೆ ರಾತ್ರಿ ನಡೆದ ಕೋಮುಗಲಭೆ ಪ್ರಕರಣದಲ್ಲಿ ಸುಮಾರು 42 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧಿತ ಸಂಬಂಧಿ ಮಹಿಳೆಯರು ಠಾಣೆ ಮುಂದೆ ಜಮಾಯಿಸಿ, ಮನೆಯಲ್ಲಿದ್ದವರನ್ನು ಬಂಧಿಸಿ ಕರೆತಂದಿದ್ದಾರೆ. ಅವರನ್ನು ಬಿಡಬೇಕು ಎಂದು ಆಗ್ರಹಿಸಿದ್ದಾರೆ.

Also read: ಸಮರಸ-ಸಮರ ಎರಡಕ್ಕೂ ಸಜ್ಜಾಗಿ: ರಾಘವೇಶ್ವರ ಶ್ರೀ ಕರೆ
ನಮ್ಮ ಮಕ್ಕಳನ್ನು ತೋರಿಸಿ, ಅವರನ್ನು ಬಿಡುಗಡೆ ಮಾಡಿ ಎಂದು ಪಟ್ಟು ಹಿಡಿದಿದ್ದು, ಈ ವೇಳೆ ಪೊಲೀಸರು ಹಾಗೂ ಮಹಿಳೆಯರ ನಡುವೆ ವಾಗ್ವಾದ ಕೂಡ ನಡೆದಿದೆ. ಮಹಿಳೆಯರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟು, ಹೈರಾಣಾಗಿದ್ದಾರೆ.

ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬರುತ್ತಿದ್ದಂತೆಯೇ ಮುಸ್ಲಿಂ ಯುವಕರು ಘೋಷಣೆ ಕೂಗಬೇಡಿ ಎಂದು ಆಕ್ಷೇಪಿಸಿ ಕಲ್ಲು ತೂರಾಟ ನಡೆಸಿದ್ದಾರೆ. ದರ್ಗಾ ಬಳಿಯಲ್ಲಿ ಘೋಷಣೆ ಕೂಗಬೇಡಿ, ಡೊಳ್ಳು ಬಾರಿಸಬೇಡಿ ಎಂದು ಆಕ್ಷೇಪಿಸಿದ್ದು, ಈ ವೇಳೆ ವಾಗ್ವಾದ ನಡೆದಿದ್ದು, ಏಕಾಏಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ.
ಸದ್ಯ ನಗರ ಬೂದಿಮುಚ್ಚಿದ ಕೆಂಡದಂತಾಗಿದ್ದು, ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post