ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ #Arvind Kejriwal ಅವರಿಗೆ ಸುಪ್ರೀಂ ಕೋರ್ಟ್ #Supreme Court ಇಂದು ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ತೀರ್ಪು ನೀಡಿದ್ದು, ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

ಸಿಬಿಐ ತಮ್ಮನ್ನು ಬಂಧಿಸಿರುವುದರ ಸಿಂಧುತ್ವ ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಕೇಜ್ರಿವಾಲ್ ಅವರು ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್’ಗೆ ಸಲ್ಲಿಸಿದ್ದರು.

ಇದು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 (ಎ) (3) ಉಲ್ಲಂಘನೆಯಲ್ಲ ಎಂದು ನ್ಯಾಯಾಲಯ ವಿವರಿಸಿದೆ. ಮ್ಯಾಜಿಸ್ಟೆçÃಟ್ ನ್ಯಾಯಾಲಯ ವಾರೆಂಟ್ ಹೊರಡಿಸಿದ್ದಾಗ ತನಿಖಾ ಸಂಸ್ಥೆ ಅದಕ್ಕೆ ಕಾರಣ ನೀಡುವುದರಿಂದ ಮುಕ್ತವಾಗಿರುತ್ತದೆ. ಅರ್ಜಿದಾರ ಬಂಧನ ಯಾವುದೇ ಕಾರ್ಯವಿಧಾನದ ಲೋಪದಿಂದ ಬಳಲುತ್ತಿಲ್ಲ. ಹೀಗಾಗಿ ಬಂಧನ ಮಾನ್ಯವಾಗಿದೆ ಎಂದು ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post