ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ನಾಗಮಂಗಲದಲ್ಲಿ #Nagamangala Riots ಗಣೇಶೋತ್ಸವದ ಮೇಲೆ ಕಲ್ಲು, ಬಾಟಲಿ, ಪೆಟ್ರೋಲ್ ಬಾಂಬ್ ಎಸೆದ ಹಿನ್ನೆಲೆಯಲ್ಲಿ ಆರಂಭವಾದ ಕೋಮುಗಲಭೆ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ನಗರ ಠಾಣೆ ಇನ್ಸ್’ಪೆಕ್ಟರ್ ಅಶೋಕ್ ಕುಮಾರ್ #SI Suspended ಅವರನ್ನು ಅಮಾನತು ಮಾಡಲಾಗಿದೆ.
ಈ ಕುರಿತಂತೆ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಅಮಾನತು ಆದೇಶ ಹೊರಡಿಸಿದ್ದು, ನಾಗಮಂಗಲ ಕೋಮುಗಲಭೆ ಪ್ರಕರಣವನ್ನು ನಿರ್ವಹಿಸುವಲ್ಲಿ ಅಶೋಕ್ ಕುಮಾರ್ ಅವರು ಕರ್ತವ್ಯ ನಿರ್ಲಕ್ಷ ವಹಿಸಿದ್ದಾರೆ ಎಂದು ಅಮಾನತು ಮಾಡಿದ್ದಾರೆ.

Also read: ನರ್ಸ್ ಮೇಲೆ ಗ್ಯಾಂಗ್ ರೇಪ್’ಗೆ ವೈದ್ಯ ಸಹಚರರು ಯತ್ನ | ರೊಚ್ಚಿಗೆದ್ದ ಆಕೆ ಮಾಡಿದ್ದೇನು?
ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬರುತ್ತಿದ್ದಂತೆಯೇ ಮುಸ್ಲಿಂ ಯುವಕರು ಘೋಷಣೆ ಕೂಗಬೇಡಿ ಎಂದು ಆಕ್ಷೇಪಿಸಿ ಕಲ್ಲು ತೂರಾಟ ನಡೆಸಿದ್ದಾರೆ. ದರ್ಗಾ ಬಳಿಯಲ್ಲಿ ಘೋಷಣೆ ಕೂಗಬೇಡಿ, ಡೊಳ್ಳು ಬಾರಿಸಬೇಡಿ ಎಂದು ಆಕ್ಷೇಪಿಸಿದ್ದು, ಈ ವೇಳೆ ವಾಗ್ವಾದ ನಡೆದಿದ್ದು, ಏಕಾಏಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ.

ಕಿಡಿಗೇಡಿಗಳ ಗುಂಪು ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಂಡವರ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದು, ಸಿಕ್ಕ ಸಿಕ್ಕ ಅಂಗಡಿ, ವಾಹನಗಳಿಗೂ ಸಹ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಹಲವು ವಾಹನಗಳು ಸುಟ್ಟು ಕರಕಲಾಗಿವೆ.
ಘಟನೆಯಲ್ಲಿ ಉದ್ದೇಶ ಪೂರ್ವಕವಾಗಿ ಕಿರಿಕ್ ತೆಗೆದಿರುವ ಕಿಡಿಗೇಡಿಗಳು ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡೇ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಹಿಂದೂಗಳ ಅಂಗಡಿ, ಕಾರು, ಬೈಕ್’ಗಳ ಮೇಲೆ ದಾಳಿ ನಡೆಸಿರುವುದು ಇದಕ್ಕೆ ಸಾಕ್ಷಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post