ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನಾಗಮಂಗಲ ಗಲಭೆ #Nagamangala Violence ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ಅವರು ಮಂಡ್ಯ ಎಸ್ಪಿಗೆ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಇದ್ದಂತಿದೆ. ನಿಜವಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸೂಚಿಸಿದರು.
ನಾಗಮಂಗಲದಲ್ಲಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಗೆ ಎಲ್ಲದೂ ಸರ್ಕಾರದ ನಿಯಮ ಮತ್ತು ಪೊಲೀಸ್ ಇಲಾಖೆ ಅನುಮತಿ ಮೇರೆಗೆ ನಡೆದಿದೆ. ಗಲಭೆ ಖಂಡಿಸಿ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ಹೇಳಿದರು.
Also read: ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ: ಕೇಂದ್ರ ಸಚಿವ ಕುಮಾರಸ್ವಾಮಿ ನೇರ ಆರೋಪ
ಮಸೀದಿ ಇರುವುದೇ ರಸ್ತೆಯಲ್ಲಿ. ಇನ್ನು, ಇಲ್ಲಿ ಓಡಾಡಬೇಡಿ, ವಾದ್ಯ ಬರಿಸಬೇಡಿ ಎಂದರೆ ಹೇಗೆ? ಇದನ್ನೇನು ಪಾಕಿಸ್ತಾನ #Pakistan ಮಾಡಿದ್ದಾರೆಯೇ? ಎಂದು ಜೋಶಿ ಹರಿ ಹಾಯ್ದರು.
ಗಲಭೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದವರನ್ನು ಬಿಟ್ಟು ಗಣಪತಿ ಇಟ್ಟವರನ್ನು, ಸಿಕ್ಕ ಸಿಕ್ಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಕ್ರಮ ಜರುಗಿಸುವುದು ಸರಿಯಲ್ಲ ಎಂದು ಜೋಶಿ ಖಂಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post