ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಪ್ರಸಿದ್ಧ ಹಿಂದೂ ಮಹಾಮಂಡಳಿ #Shivamogga Hindu Mahasabha Ganapathi ವತಿಯಿಂದ ನಗರದ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯ ಅದ್ದೂರಿಯಾಗಿ ನಡೆಯಲಿದ್ದು, ನಗರವೆಲ್ಲ ಕೇಸರಿ ಧ್ವಜ ಹಾಗೂ ವಿವಿಧ ಅಲಂಕಾರಗಳೊಂದಿಗೆ ಸಿಂಗಾರಗೊಂಡಿದೆ.
ಇಂದು ರಾತ್ರಿ 8ಕ್ಕೆ ಮಹಾಮಂಗಳರಾತಿ ನಡೆಯಲಿದ್ದು, ನಾಳೆ ಬೆಳಿಗ್ಗೆ 9.30ಕ್ಕೆ ಗಣಪತಿ ವಿಸರ್ಜನಾ ಪೂರ್ವ ಮೆರವಣ ಗೆ ಭೀಮೇಶ್ವರ ದೇವಸ್ಥಾನದಿಂದ ಆರಂಭಗೊಳಲಿದೆ. ಕೋಟೆ ಮಾರಿಕಾಂಬಾ ವೃತ್ತದ ಬಳಿ, ಬೆಕ್ಕಿನ ಕಲ್ಮಠ ಹಾಗೂ ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಶ್ರೀಗಳು ಗಣಪತಿಗೆ ಆರತಿ ಮಾಡುವುದರೊಂದಿಗೆ ಚಾಲನೆ ದೊರೆಯಲಿದೆ.
ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್, ಮಹಾನಗರ ಪಾಲಿಕೆ ಮತ್ತು ಹಿಂದೂ ಮಹಾಮಂಡಳಿ ಸಕಲ ಸಿದ್ಧತೆ ಮಾಡಿದ್ದು, ನಗರದ ಶಿವಪ್ಪನಾಯಕ ವೃತ್ತದ ಬಳಿ ಗಾಂಧಿಬಜಾರ್ ಮುಖ್ಯ ದ್ವಾರದಲ್ಲಿ ಕಾಶಿ ವಿಶ್ವನಾಥನ ಮಹಾದ್ವಾರ ಹಾಗೂ ಅಮೀರ್ ಅಹಮ್ಮದ್ ವೃತ್ತದಲ್ಲಿ ಆಯೋಧ್ಯೆಯ ಪ್ರತಿಕೃತಿ ಹಾಗೂ ನಗರದ ನೆಹರು ರಸ್ತೆಯಲ್ಲಿ ಗಣಪತಿಯ ವಿವಿಧ ನಾಮವಳಿ ಹಾಗೂ ಅಲಂಕೃತ ಪ್ಲೆಕ್ಸ್‌ಗಳು, ದೈವಜ್ಞವೃತ್ತದಲ್ಲಿ ಗರುಡನ ಅಲಂಕಾರ , ಎಂ.ಆರ್.ಎಸ್.ವೃತ್ತದಲ್ಲಿ ಶಿವಾಜಿ ಮಹಾರಾಜರ ಪ್ರತಿಕೃತಿ ಸ್ಥಾಪಿಸಲಾಗಿದೆ.
ಈಗಾಗಲೇ ಜನ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸೆಲ್ಪಿ ತೆಗೆದುಕೊಳ್ಳುತ್ತಿದ್ದು, ಜನಾಕರ್ಷಣೆಯ ಕೇಂದ್ರವಾಗಿದೆ. ಹಲವಾರು ಸಂಘ ಸಂಸ್ಥೆಗಳು ಗಣಪತಿಗೆ ನೂರಾರು ಸಂಖ್ಯೆಯಲ್ಲಿ ಬೃಹತ್ ಹಾರಗಳನ್ನು ಅರ್ಪಿಸಲು ಸಿದ್ಧತೆ ನಡೆಸಿವೆ. ಬೆಳಿಗ್ಗೆ 9.30ಯಿಂದ ನಾಡಿದ್ದು ಬೆಳಿಗ್ಗೆ3ರವರೆಗೆ ಮೆರವಣ ಗೆ ಪ್ರಮುಖ ಬೀದಿಗಳಲ್ಲಿ ಸಾಗಲಿದ್ದು, ಹಲವಾರು ಸಂಘ ಸಂಸ್ಥೆಗಳು, ಮಜ್ಜಿಗೆ, ಪಾನಕ, ಕೊಸುಂಬರಿ ಮತ್ತು ಉಪಹಾರದ ವ್ಯವಸ್ಥೆ ಹಾಗೂ ಸಿಹಿ ಹಂಚಿಕೆ ಮಾಡಲಿದ್ದು, ಜಿಲ್ಲಾ ಪೊಲೀಸ್ ವತಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರು ರಾಜ್ಯದ ವಿವಿಧೆಡೆಯಿಂದ ಆಗಮಿಸಲಿದ್ದಾರೆ. ಮೂರು ಆರ್‌ಪಿಎಫ್ ಬೆಟಾಲಿಯನ್ ಮತ್ತು ಕೆ.ಎಸ್.ಆರ್.ಪಿ. ತುಕುಡಿ, ಡಿಎಆರ್ ಪೊಲೀಸ್ ಆಗಮಿಸಿದ್ದು, ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ವಹಿಸಲಾಗಿದ್ದು, ಶಾಂತಿ ಸುವ್ಯವಸ್ಥೆಗೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ನೂರಾರು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಗೋಪಿ ವೃತ್ತ ಸೇರಿದಂತೆ ಅನೇಕ ಪ್ರಮುಖ ವೃತ್ತಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಿದ್ದತೆ ನಡೆಸಲಾಗಿದ್ದು, ಜನಪ್ರತಿನಿಧಿಗಳು ಕೂಡ ಈ ಮೆರವಣ ಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post