ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಹಳೆಯ ಭಾರತೀಯ ದಂಡ ಸಂಹಿತೆಯ ಬದಲಾಗಿ ಈಗ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬಂದಿದ್ದು, ಈಗಿನ ಕಾನೂನಿನಲ್ಲಿ ಶಿಕ್ಷೆಯು ಸಾರ್ವಜನಿಕ ಸೇವೆಯ ರೂಪದಲ್ಲಿಯೂ ಇರಲು ಅವಕಾಶ ಮಾಡಿಕೊಟ್ಟಿದೆ ಎಂದು ನ್ಯಾಯವಾದಿ ವಿಪುಲ್‌ತೇಜ್ ತಿಳಿಸಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ನೂತನ ಭಾರತೀಯ ನ್ಯಾಯ ಸಂಹಿತೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
Also read: ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ
ಹಳೆಯ ಬಾರತೀಯ ದಂಡ ಸಂಹಿತೆ ಹಾಗೂ ನೂತನ ಭಾರತೀಯ ನ್ಯಾಯ ಸಂಹಿತೆಯ ನಡುವಿನ ವ್ಯತ್ಯಾಸವನ್ನು ತಿಳಿಸಿದ ಅವರು, ಭಾರತೀಯ ಸಾಕ್ಷ್ಯ ಅಧಿನಿಯಮ, ಭಾರತೀಯ ನ್ಯಾಯ ಸಂಹಿತೆ ಹಾಗೂ ಭಾರತೀಯ ನಾಗರಿಕ ಸುರಕ್ಷಿತ ಸಂಹಿತೆ ಎಂಬ ಮೂರು ಕಾನೂನು ವಿಭಾಗಗಳಿವೆ ಎಂದು ವಿವರಿಸಿದರು.
ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೇಸನ್ ಡಿ’ಸೋಜ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post