ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರು ದಸರಾ #MysoreDasara ಜಂಬೂಸವಾರಿಗಾಗಿ ಅರಮನೆ #Palace ಆವರಣಕ್ಕೆ ಆಗಮಿಸಿರುವ ಎರಡು ಆನೆಗಳು ನಿನ್ನೆ ರಾತ್ರಿ ಕಾದಾಡಿಕೊಂಡಿದ್ದು, ಬೀದಿಯಲ್ಲಿ ಓಡಿದ ಪರಿಣಾಮ ಜನರು ಬೆಚ್ಚಿ ಬಂದಿರುವ ಘಟನೆ ನಡೆದಿದೆ.
ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆಗಳು ಗಲಾಟೆ ಮಾಡಿಕೊಂಡು ಅರಮನೆ ಆವರಣ ಹಾಗೂ ಮುಂಭಾಗದ ಬೀದಿಗೆ ಓಡಿ ಬಂದಿದ್ದು, ಸ್ಥಳದಲ್ಲಿದ್ದ ಜನರು ಆತಂಕಕ್ಕೆ ಒಳಗಾಗಿದ್ದರು.
ಅರಮನೆ ಆವರಣದಲ್ಲಿದ್ದ ಧನಂಜಯ ಆನೆ ಏಕಾಏಕಿ ಆಕ್ರೋಶಗೊಂಡು ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯ ಜಯ ಮಾರ್ತಾಂಡ ಮುಖ್ಯದ್ವಾರದ ಪಕ್ಕದ ಕೋಡಿ ಸೋಮೇಶ್ವರ ದೇಗುಲದ ದ್ವಾರದಿಂದ ಆಚೆ ಓಡಿ ಬಂದಿದೆ. ಆದರೂ ಬೆನ್ನು ಬಿಡದ ಧನಂಜಯ ಆನೆ ಕಂಜನ್ ಆನೆಯನ್ನು ಅಟ್ಟಿಸಿಕೊಂಡು ಬಂದಿದೆ.

ಯಾವಾಗ ಧನಂಜಯ ಅಟ್ಟಾಡಿಸುವುದನ್ನು ನಿಲ್ಲಿಸಿತೋ ಬದುಕಿದೆಯಾ ಬಡ ಜೀವ ಅಂತ ಕಂಜನ್ ಆನೆ ಸಹ ನಿಂತುಕೊಂಡಿದೆ. ತಕ್ಷಣ ಕಂಜನ್ ಆನೆಯ ಬಳಿ ತೆರಳಿದ ಮಾವುತ, ಕಂಜನ್ ಆನೆಯನ್ನು ಅರಮನೆ ಒಳಗೆ ಕರೆ ತಂದಿದ್ದಾನೆ. ಈ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಮಾವುತರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಟ್ಟದಂತೆ ಬಂದ ಸಮಸ್ಯೆ ಮಂಜಿನಂತೆ ಕರಗಿ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post