No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ: ಸಿಎಂ ಸಿದ್ಧರಾಮಯ್ಯ

kalpa News by kalpa News
September 24, 2024
in ಬೆಂಗಳೂರು ನಗರ
0
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ #CM Siddaramaiah ಹೇಳಿದ್ದಾರೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ ಎಂದಿದ್ದಾರೆ.

Also read: ನೈತಿಕತೆಯ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್. ಅಶೋಕ್ ಆಗ್ರಹ

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಿಎಂ ಸಿದ್ಧರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೈತಿಕತೆಯ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್. ಅಶೋಕ್ ಆಗ್ರಹ

Next Post

ವನ್ಯ ಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯ

kalpa News

kalpa News

Next Post
ವನ್ಯ ಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯ

ವನ್ಯ ಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL