ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ವಿರುದ್ಧ ಎಫ್’ಐಆರ್ ದಾಖಲಿಸಿ, ಆರು ವಾರಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ ತೀರ್ಪು ನೀಡಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ರದ್ದು ಮಾಡಿ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನೇ ನಿನ್ನೆ ಹೈಕೋರ್ಟ್ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.

Also read: ನಡು ರಸ್ತೆಯಲ್ಲಿ ಕುಳಿತು ಸಂಸದ ರಾಘವೇಂದ್ರ, ಎಂಎಲ್’ಸಿ ಸರ್ಜಿ ಪ್ರತಿಭಟನೆ | ಆಗ್ರಹವೇನು?
ಪ್ರಮುಖವಾಗಿ ಮೂರು ತಿಂಗಳ ಅವಧಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ತನಿಖಾ ವರದಿ ಸಲ್ಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.
ಇನ್ನು, ಡಿ.24ಕ್ಕೆ ಪ್ರಕರಣದ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.
ಮೂಡಾ ಹಗರಣ ತನಿಖೆ ಅಗತ್ಯವಿದ್ದು, ನಕಲಿ ದಾಖಲೆ ಸೃಷ್ಟಿಸಿ ಡಿನೋಟೀಫೈ ವಿಚಾರವನ್ನು ನ್ಯಾಯಾಲಯ ಉಲ್ಲೇಖಿಸಿದೆ. ಇನ್ನು, ನಿನ್ನೆ ರಾಜ್ಯಪಾಲರ ಆದೇಶ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ್ದ ಹೈಕೋರ್ಟ್ ಶಾಕ್ ನೀಡಿತ್ತು.
ಇಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದ್ದು ಮೂಡಾ ಹಗರಣದಲ್ಲಿ ತನಿಖೆಯ ಅಗತ್ಯ ಎದ್ದು ಕಾಣುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಡಿ ನೋಟಿಫೈ ಮಾಡಿದಾರೆ. ಅಸಲಿಗೆ ದೇವರಾಜು ಅವರು ಆಸ್ತಿ ಮಾಲೀಕರಲ್ಲದಿದ್ದರೂ ಖರೀದು ಮಾಡಿದ್ದು ಏಕೆ? ಎಂದು ಪ್ರಶ್ನಿಸಿರುವ ಕೋರ್ಟ್, ಅವರಿಂದ ಖರೀದಿ ಮಾಡಿರುವುದರ ಹಿಂದೆ ಅಸಲಿ ವಿಷಯ ಹೊರಬರಬೇಕಾದರೆ ತನಿಖೆಯ ಅಗತ್ಯ ಇದ್ದು ಇದರಲ್ಲಿ ಮುಖ್ಯಮಂತ್ರಿ ಹಾಗೂ ಕುಟುಂಬದ ಪಾತ್ರ ಇದೆ ಎಂದಿದ್ದು, ಮತ್ತೊಂದು ಕಾನೂನು ಕುಣಿಕೆಗೆ ಸಿದ್ದರಾಮಯ್ಯ ಸಿದ್ದರಾಗಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post