ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಮಂತ್ರಿ ನರೇಂದ್ರಮೋದಿಯವರ #PM Narendra Modi ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂದು ದಶಕದ ಅವಧಿಯಲ್ಲಿ ರಾಜ್ಯ ರೈಲ್ವೇ ಕ್ಷೇತ್ರದಲ್ಲಿ ಅನೇಕ ಮಹತ್ವ ನಿರ್ಣಯಗಳನ್ನು ಕೈಗೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿರುವುದು ಎಲ್ಲರಲ್ಲೂ ಸಂತಸ ಮೂಡಿಸಿದೆ ಎಂದು ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ #V Somanna ಹೇಳಿದರು.
ಅವರು ಶಿಕಾರಿಪುರದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಅಭಿವೃದ್ಧಿ ಕಾಮಗಾರಿಗಳು, ಶಿವಮೊಗ್ಗ ಸಮೀಪದ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಹಾನಗರಗಳಿಂದ ಗ್ರಾಮೀಣ ಪ್ರದೇಶಗಳವರೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೇ ಇಲಾಖೆಯು ಸೈನಿಕರಂತೆ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಸಹ ನುಡಿದಂತೆ ಮುನ್ನಡೆಯುತ್ತಿದೆ ಎಂದ ಅವರು, ರೈಲ್ವೇ ಕ್ಷೇತ್ರ ಅಸಾಧಾರಣ ಪ್ರಗತಿ ಹಾಗೂ ಕ್ರಾಂತಿಕಾರಿ ಬದಲಾವಣೆಗೆ ಹೊಸಭಾಷ್ಯ ಬರೆದಿದೆ ಎಂದರು.
Also read: ಜಿಲ್ಲಾ ಯುವ ಅಣುಕು ಸಂಸತ್ ಸ್ಪರ್ಧೆ | ಶಿಕಾರಿಪುರದ ಕುಮದ್ವತಿ ಕಾಲೇಜಿನ ಅಮೋಘ ಸಾಧನೆ
ರೈಲ್ವೇ ಕ್ಷೇತ್ರದ ಪ್ರಗತಿ ಜನಸಾಮಾನ್ಯರ ಬೇಡಿಕೆ ಎಂದು ಪರಿಗಣಿಸದೇ ಅವಶ್ಯಕತೆ ಎಂದೇ ಭಾವಿಸಲಾಗಿದೆ. ರಾಣೆಬೆನ್ನೂರು-ಶಿಕಾರಿಪುರ ಹೊಸ ರೈಲ್ವೇ ಮಾರ್ಗದ ಪ್ರಗತಿಯು ಆಶಾದಾಯಕವಾಗಿಲ್ಲ. ಮುಂದಿನ ಎಂಟು ದಿನಗಳೊಳಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಸಂಬAಧಿತ ಇಲಾಖಾಧಿಕಾರಿಗಳು ಸಮಗ್ರ ವರದಿ ನೀಡುವಂತೆ ಸೂಚಿಸಿದ ಅವರು, ಈ ಭಾಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ನಡೆಸುವ ಅಧಿಕಾರಿಗಳು ರೈತರಿಗೆ ಪರಿಹಾರಧನ ಒದಗಿಸುವ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ವ್ಯವಹರಿಸಿ, ಒಂದು ತಿಂಗಳೊಳಗಾಗಿ ಪರಿಹಾರಧನ ವಿತರಿಸುವಂತೆ ಸೂಚಿಸಿದರು.
ಮೋದಿಯವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಅನೇಕ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ಭೂಸ್ವಾದೀನ ಪ್ರಕ್ರಿಯೆ ಸಮಾಧಾನಕರವಾಗಿದ್ದರೂ ರಾಣೆಬೆನ್ನೂರು-ಶಿಕಾರಿಪುರ ಮಾರ್ಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ನಿರೀಕ್ಷೆಯಂತೆ ಪೂರ್ಣಗೊಂಡಿಲ್ಲ. ಇನ್ನೂ 642 ಎಕರೆ ಭೂಪ್ರದೇಶ ಮಾಲೀಕರಿಂದ ರೈಲ್ವೇ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ತುರ್ತಾಗಿ ಆಗಬೇಕಾಗಿದೆ. ಡಿಸೆಂರ್ಬ ಮಾಸಾಂತ್ಯದೊಳಗಾಗಿ ಭೂಸ್ವಾದೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಂಯುಕ್ತವಾಗಿ ಈ ಕಾರ್ಯದಲ್ಲಿ ಸಮನ್ವಯತೆ ಸಾಧಿಸಿ, ಉದ್ದೇಶಿತ ಯೋಜನೆಯು ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳ ಸಕಾಲಿಕ ಸಹಕಾರ ಹಾಗೂ ಮಾರ್ಗದರ್ಶನದಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ರೈಲ್ವೇ ಯೋಜನೆಗಳು ಯಶಸ್ಸು ಕಂಡಿವೆ. ಅಲ್ಲದೇ ದೇಶದಾದ್ಯಂತ ವರ್ಷಕ್ಕೆ ಸರಾಸರಿ ನೂರು ಕೋಟಿಗೂ ಹೆಚ್ಚಿನ ಜನ ರೈಲ್ವೇಪ್ರಯಾಣದ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಮಲೆನಾಡಿನಿಂದ ಬಯಲುಸೀಮೆಗೆ ಸಂಪರ್ಕ ಕಲ್ಪಿಸುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ನಿರ್ಮಾಣದಲ್ಲಿ ಶಿಕಾರಿಪುರ-ಶಿವಮೊಗ್ಗ ಮಾರ್ಗದ ಭೂಸ್ವಾದೀನ ಕಾರ್ಯ ತಕ್ಕಮಟ್ಟಿನ ಯಶಸ್ಸು ಕಂಡಿದೆ. ರಾಣೆಬೆನ್ನೂರು-ಶಿಕಾರಿಪುರ ನಡುವಿನ ಭೂಸ್ವಾದೀನ ಕಾರ್ಯ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಸಂಬಅಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸಿ, ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಹಾರನಹಳ್ಳಿ ರೈಲ್ವೇ ನಿಲ್ದಾಣದ ಪ್ಲಾಟಫಾರಂನ್ನು ಅಭಿವೃದ್ಧಿಪಡಿಸಲು ಇಲಾಖೆಯು ಈಗಾಗಲೇ ೨ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದರು.
ಸಭೆಯಲ್ಲಿ ಸೌತ್ ವೆಸ್ಟನ್ ರೈಲ್ವೆಯ ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಶ್ರೀವತ್ಸ, ಡಿಆರ್’ಎಂ. ಆಶಾ, ಅಗರ್ವಾಲ್, ಪ್ರಕಾಶ್ಶಾಸ್ತಿ, ಕ್ರೀಸ್ಟೋಫರ್, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಭಾರತಿಶೆಟ್ಟಿ, ಬಲ್ಕಿಶ್ ಬಾನು, ಅರುಣ್ ಕುಮಾರ್, ಡಾ.ಧನಂಜಯ ಸರ್ಜಿ, ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುರ್ಮಾ ಸೇರಿದಂತೆ ರೈಲ್ವೇ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post